ಮೇ 2 ರಿಂದ 4 : ನರೇಂದ್ರ ಪ.ಪೂ. ಕಾಲೇಜಿನಲ್ಲಿ ಉಚಿತ ವ್ಯಕ್ತಿತ್ವ ವಿಕಸನ ಶಿಬಿರ – ತರಂಗ-2023

ಪುತ್ತೂರು: ಪ್ರಥಮ ಪಿಯುಸಿಯಲ್ಲಿ ವಿಜ್ಞಾನ ಮತ್ತು ವಾಣಿಜ್ಯ ವಿಭಾಗ ಆಯ್ಕೆ ಮಾಡ ಬಯಸುವ ವಿದ್ಯಾರ್ಥಿಗಳಿಗಾಗಿ ಮೂರು ದಿನಗಳ ವ್ಯಕ್ತಿತ್ವ ವಿಕಸನ ಶಿಬಿರ “ತರಂಗ-2023” ಮೇ2 ರಿಂದ 4 ರಂದು ತೆಂಕಿಲ ನರೇಂದ್ರ ಪ.ಪೂ.ಕಾಲೇಜಿನಲ್ಲಿ ನಡೆಯಲಿದೆ.

ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆ ಮತ್ತು ಪ್ರತಿಭೆಯ ಅಭಿವ್ಯಕ್ತಿಗೆ ಪೂರಕವಾದ ವೇದಿಕೆಯನ್ನು ಕಲ್ಪಿಸುವುದೇ ಕಾರ್ಯಕ್ರಮದ ಉದ್ದೇಶವಾಗಿದೆ. 2022-23ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಬರೆದು ಕನ್ನಡ ಮತ್ತು ಇಂಗ್ಲೀಷ್ ಮಾಧ್ಯಮದ ವಿದ್ಯಾರ್ಥಿಗಳಿಗೆ ಕಾರ್ಯಾಗಾರದಲ್ಲಿ ಅವಕಾಶವಿದೆ.

ವಿದ್ಯಾರ್ಥಿಗಳ ಏಕಾಗ್ರತೆಯನ್ನು ವೃದ್ಧಿಸುವ ನಿಟ್ಟಿನಲ್ಲಿ ಯೋಗ, ವಿದ್ಯಾರ್ಥಿಗಳ ಬೌದ್ಧಿಕ ಮತ್ತು ಮಾನಸಿಕ ಸಾಮರ್ಥ್ಯವನ್ನು ಬಲಪಡಿಸುವಂತಹ ಚಟುವಟಿಕೆ ಆಧಾರಿತ ಕಲಿಕೆಯನ್ನು ಈ ಕಾರ್ಯಾಗಾರದಲ್ಲಿ ಅಯೋಜಿಸಲಾಗಿದೆ.ಕ್ರಾಫ್ಟ್ ಡಿಸೈನ್, ವಾರ್ಲಿ ಆರ್ಟ್, ಕ್ಲೇ ಮಾಡೆಲಿಂಗ್, ಅಬಾಕಸ್ ತರಗತಿಗಳು, ಪೇಂಟಿಂಗ್, ಮ್ಯೂಸಿಕ್ ಮತ್ತು ಡಾನ್ಸ್ ಗೆ ಪೂರಕವಾದ ಚಟುವಟಿಕೆಗಳು, ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಆತ್ಮವಿಶ್ವಾಸದಿಂದ ಎದುರಿಸುವ ಸುಲಭೋಪಾಯಗಳು, ಶಿಕ್ಷಣ ಕ್ಷೇತ್ರದಲ್ಲಿರುವ ಅಪರಿಮಿತ ಅವಕಾಶಗಳ ಬಗ್ಗೆ ಮಾಹಿತಿ, ಫನ್ ಗೇಮ್ಸ್ ಹಾಗೂ ಇನ್ನೂ ಅನೇಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.



































 
 

ಮೂರು ದಿನಗಳ ಕಾಲ ಉಚಿತವಾಗಿ ನಡೆಯುವ ಶಿಬಿರ ಪ್ರತಿದಿನ ಬೆಳಗ್ಗೆ 10 ರಿಂದ ಸಂಜೆ 3.30 ರ ವರೆಗೆ ನಡೆಯಲಿದೆ.ಆಸಕ್ತ ವಿದ್ಯಾರ್ಥಿಗಳು ತಮ್ಮ ಹೆಸರನ್ನು ಇ-ಮೇಲ್ [email protected] ಅಥವಾ 9481917888, 6360168184, 08251-298555 ನಂಬರ್ ಗೆ ಸಂಪರ್ಕಿಸುವ ಮೂಲಕ ಮೇ ೧ ರ ಒಳಗೆ ಉಚಿತವಾಗಿ ನೋಂದಾಯಿಸಿಕೊಳ್ಳಬಹುದು ಎಂದು ಪ್ರಾಂಶುಪಾಲರಾದ ಪ್ರಸಾದ್ ಶ್ಯಾನಭಾಗ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈಗಾಗಲೇ ಪ್ರಥಮ ಪಿಯುಸಿಗೆ ದಾಖಲಾತಿ ಆರಂಭಗೊಂಡಿದ್ದು,ಹೆಚ್ಚಿನ ಮಾಹಿತಿಗಾಗಿ ಕಾಲೇಜಿನ ವೆಬ್‌ಸೈಟ್ www.narendrapu.vivekanandaedu.org ಅಥವಾ E-mail: [email protected] ಅಥವಾ ಮೊಬೈಲ್ ಸಂಖ್ಯೆ: 9481917888, 08251- 298555 ನ್ನು ಸಂಪರ್ಕಿಸಬಹುದು. ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top