ಪುತ್ತೂರು: ಪುತ್ತೂರು ಬ್ಲಾಕ್ ಕಾಂಗ್ರೆಸ್ ನಗರ ಹಾಗೂ ಗ್ರಾಮೀಣ ಪ್ರಚಾರ ಸಮಿತಿಗೆ ಸಂಚಾಲಕರು ಹಾಗೂ ಸಹಸಂಚಾಲಕರನ್ನು ನೇಮಕ ಮಾಡಲಾಗಿದೆ.
ನಗರ ಸಮಿತಿ ಸಂಚಾಲಕರಾಗಿ ಪ್ರಸನ್ನ ಕುಮಾರ್ ಶೆಟ್ಟಿ, ಸಹಸಂಚಾಲಕರಾಗಿ ಶಿವನಾಥ ರೈ ಮೇಗಿನಗುತ್ತು ಹಾಗೂ ಹರ್ಷದ್ ದರ್ಬೆ ಅವರನ್ನು ನೇಮಕ ಮಾಡಲಾಗಿದೆ.
ಗ್ರಾಮೀಣ ಪ್ರಚಾರ ಸಮಿತಿ ಸಹಸಂಚಾಲಕರಾಗಿ ಶಶಿಕಿರಣ್ ರೈ ನೂಜಿಬೈಲು, ಬೂಡಿಯಾರ್ ಪುರುಷೋತ್ತಮ ರೈ ಅವರನ್ನು ನೇಮಕ ಮಾಡಲಾಗಿದೆ.
ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಬಿ.ವಿಶ್ವನಾಥ ರೈ, ಪ್ರಚಾರ ಸಮಿತಿ ಅಧ್ಯಕ್ಷ ಭಾಸ್ಕರ ಗೌಡ ಕೋಡಿಂಬಾಳ ಅವರ ಶಿಫಾರಸಿನ ಮೇರೆಗೆ ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ಭರತ್ ಮುಂಡೋಡಿಯವರು ಈ ನೇಮಕ ಮಾಡಿದ್ದಾರೆ.