ವಿಟ್ಲ: ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಅವರ ಪರವಾಗಿ ಕೇಪು ಬಿಜೆಪಿ ಶಕ್ತಿ ಕೇಂದ್ರದಲ್ಲಿ ಪ್ರಚಾರ ಸಭೆ ನಡೆಯಿತು.
ಅಭ್ಯರ್ಥಿ ಆಶಾ ತಿಮ್ಮಪ್ಪ ಮಾತನಾಡಿ, ಹಿಂದುತ್ವ ಹಾಗೂ ಅಭಿವೃದ್ಧಿಯ ನೆಲೆಯಲ್ಲಿ ಕೆಲಸ ಮಾಡುತ್ತಿರುವ ಪಕ್ಷ ಬಿಜೆಪಿ. ಹಿಂದುತ್ವ ಪರವಾಗಿ ಸಾಕಷ್ಟು ಯೋಜನೆಗಳನ್ನು ಜಾರಿಗೆ ತಂದಿರುವ ಬಿಜೆಪಿ ಸರಕಾರ, ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಸಾವಿರ ಕೋಟಿ ರೂ.ಗೂ ಮಿಕ್ಕಿ ಅನುದಾನವನ್ನು ನೀಡಿದೆ. ಆದ್ದರಿಂದ ಬಿಜೆಪಿಯನ್ನು ಮತ್ತೊಮ್ಮೆ ಅಧಿಕಾರಕ್ಕೆ ತರಬೇಕು ಎಂದು ವಿನಂತಿಸಿದರು.
ಅಭ್ಯರ್ಥಿ ಆಶಾ ತಿಮ್ಮಪ್ಪ ಹಾಗೂ ರಾಷ್ಟ್ರೀಯ ಮಹಿಳಾ ಮೋರ್ಚಾ ಕಾರ್ಯಕಾರಿಣಿ ಸದಸ್ಯೆ ಬಿಂದು ಸುರೇಶ್ ನೇತೃತ್ವದಲ್ಲಿ ಕಾಂಗ್ರೆಸ್ ಕೇಪು ವಲಯ ಕಾರ್ಯದರ್ಶಿ ಧನಂಜಯ ಹಾಗೂ ಕಾಂಗ್ರೆಸ್ ಕಾರ್ಯಕರ್ತರಾದ ರವಿ ಕೊರತಿಗದ್ದೆ, ನಿತಿನ್, ನವೀನ್, ಲೋಕೇಶ್, ಸೃಜನ್, ನಿಖಿಲ್ ಮೊದಲಾದವರು ಬಿಜೆಪಿ ಸೇರ್ಪಡೆಗೊಂಡರು.
ಪುತ್ತೂರು ಬಿಜೆಪಿ ಉಪಾಧ್ಯಕ್ಷ ಹರಿಪ್ರಸಾದ್ ಯಾದವ್, ಕೇಪು ಶಕ್ತಿ ಕೇಂದ್ರದ ಸಂಚಾಲಕ ರಾಧಕೃಷ್ಣ ಶೆಟ್ಟಿ, ಕೇಪು ಗ್ರಾಮ ಪಂಚಾಯತ್ ಉಪಾಧ್ಯಕ್ಷ ರಾಘವ ಸಾರಡ್ಕ, ಸದಸ್ಯರಾದ ಪುರುಷೋತ್ತಮ ಕಲ್ಲಂಗಳ, ಪಕ್ಷದ ಪ್ರಮುಖರಾದ ತಾರಾನಾಥ ಆಳ್ವ, ಬೂತ್ ಅಧ್ಯಕ್ಷರಾದ ಅಶೋಕ್, ಪ್ರಮುಖರಾದ ಉಮೇಶ್ ಗೌಡ, ಶ್ರೀಕೃಷ್ಣ ಮಣಿಯಾಣಿ, ಚಂದ್ರಶೇಖರ್ ಮೊದಲಾದವರು ಉಪಸ್ಥಿತರಿದ್ದರು.