ಪುತ್ತೂರು: ಮೇ 6 ರಂದು ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಪುತ್ತೂರಿಗೆ ಭೇಟಿ ನೀಡಿ ರೋಡ್ ಶೋ ನಡೆಸುವ ಹಿನ್ನಲೆಯಲ್ಲಿ ವಾಹನ ಸಂಚಾರದಲ್ಲಿ ಬದಲಾವಣೆ ಮಾಡಲಾಗಿದೆ.
ವಾಹನಗಳ ಸುಗಮ ಸಂಚಾರ ಮಾಡಿಕೊಡುವ ಹಿನ್ನಲೆಯಲ್ಲಿ ದ.ಕ.ಜಿಲ್ಲಾಧಿಕಾರಿಗಳು ಈ ಆದೇಶ ಮಾಡಿದ್ದಾರೆ.

ಯೋಗಿ ಆದಿತ್ಯನಾಥ್ ಅವರು ಅಂಚೆ ಕಚೇರಿ ಬಳಿಯಿಂದ ಬಸ್ ನಿಲ್ದಾಣಕ್ಕೆ ಬಳಿ ತೆರಳಿ ಅಲ್ಲಿಂದ ಕೋರ್ಟ್ ರಸ್ತೆಯಾಗಿ ರೋಡ್ ಶೋ ಮಾಡಲಿದ್ದು, ಕಿಲ್ಲೆ ಮೈದಾನದಲ್ಲಿ ಸಾರ್ವಜನಿಕರನ್ನುದ್ದೇಶಿಸಿ ಮಾತನಾಡುವರು. ಈ ನಿಟ್ಟಿನಲ್ಲಿ ಸಾರ್ವಜನಿಕರು ಸಹಕರಿಸುವಂತೆ ಅವರು ಮನವಿ ಮಾಡಿದ್ದಾರೆ.























