ಪುತ್ತೂರು: ತಾಲೂಕು ಸ್ವೀಪ್ ಸಮಿತಿ ವತಿಯಿಂದ ಪುತ್ತೂರು ವಿಧಾನಸಭಾ ಕ್ಷೇತ್ರ ಮಟ್ಟದ ಮತದಾನ ಜಾಗೃತಿ ಕಾರ್ಯಕ್ರಮವನ್ನು ಭಾನುವಾರ ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದಲ್ಲಿ ಸಾರ್ವಜನಿಕರಿಗೆ ಆಯೋಗದಿಂದ ನೀಡಿದ ವಿವಿಧ ಮತದಾನ ಜಾಗೃತಿ ವಿಡಿಯೋ ಗಳನ್ನು ಪ್ರದರ್ಶನ ಮಾಡಲಾಯಿತು. ಮತದಾನ ಜಾಗೃತಿಗೆ ಸಂಬಂಧಿತ ಭಿತ್ತಿಪತ್ರ ಪತ್ರಗಳನ್ನು ಪ್ರದರ್ಶಿಸಿ, ಸಾರ್ವಜನಿಕರಿಗೆ ಹಂಚಿಕೆ ಮಾಡಲಾಯಿತು.
ಈ ಸಂದರ್ಭದಲ್ಲಿ ತಾಲೂಕು ಸ್ವೀಪ್ ಸಮಿತಿ ಅಧ್ಯಕ್ಷ ನವೀನ್ ಕುಮಾರ್ ಭಂಡಾರಿ, ನಗರಸಭೆ ಪೌರಾಯುಕ್ತ ಮಧು ಎಸ್ ಮನೋಹರ್, ತಾಲೂಕು ಮಟ್ಟದ ಅಧಿಕಾರಿಗಳು, ಸಿಬ್ಬಂದಿ ವರ್ಗದವರು ಹಾಜರಿದ್ದರು.