ಪುತ್ತೂರು: ಮೇ 10ರಂದು ನಡೆಯುವ ಪ್ರಜಾಪ್ರಭುತ್ವದ ಹಬ್ಬಕ್ಕೆ ಅಂತಿಮ ತಯಾರಿಗಳು ತೆಂಕಿಲ ವಿವೇಕಾನಂದ ಶಾಲೆಯಲ್ಲಿ ನಡೆಯುತ್ತಿವೆ.
ವಿವೇಕಾನಂದ ಶಾಲೆಯನ್ನು ಮಸ್ಟರಿಂಗ್ ಕೇಂದ್ರವಾಗಿ ಪರಿವರ್ತಿಸಿದ್ದು, ಅಧಿಕಾರಿಗಳು ಮಸ್ಟರಿಂಗ್ ಕಾರ್ಯದಲ್ಲಿ ನಿರತರಾಗಿದ್ದಾರೆ. ಸಂಜೆ ವೇಳೆ ಪುತ್ತೂರು ವಿಧಾನಸಭಾ ಕ್ಷೇತ್ರದ 220 ಬೂತ್ ಗಳಿಗೆ ತೆರಳಲಿದ್ದಾರೆ. ನಾಳೆ ಅಂದರೆ ಮೇ 10ರಂದು ಮತಗಟ್ಟೆಗಳಲ್ಲಿ ಮತದಾನ ನಡೆಸಿಕೊಡಲಿದ್ದಾರೆ. 1 ಸಾವಿರಕ್ಕಿಂತ ಹೆಚ್ಚಿನ ಮತದಾರರಿರುವ ಬೂತ್ ಗಳಲ್ಲಿ ಹೆಚ್ಚುವರಿ ಅಧಿಕಾರಿಗಳನ್ನು ನೇಮಿಸಲಾಗಿದೆ.
ಮಸ್ಟರಿಂಗ್ ಕೇಂದ್ರದಲ್ಲಿ ಪೊಲೀಸರು ಬೀಡು ಬಿಟ್ಟಿದ್ದು, ಬಂದೋಬಸ್ತಿನ ವ್ಯವಸ್ಥೆಗಳಲ್ಲಿ ನಿರತರಾಗಿದ್ದಾರೆ.