ಬೆಂಗಳೂರು: ಪ್ರಖರ ಮಾತಿನಿಂದಲೇ ಖ್ಯಾತರಾದ ಬಿಜೆಪಿ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಬಿಜೆಪಿ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾಗುವ ಸಾಧ್ಯತೆ ದಟ್ಟವಾಗಿದೆ.
ಎಲ್ಲವೂ ಅಂದುಕೊಂಡಂತೆ ನಡೆದರೆ ನಳಿನ್ ಕುಮಾರ್ ಕಟೀಲ್ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ ತಕ್ಷಣದಲ್ಲೇ ಯತ್ನಾಳ್ ಅವರನ್ನು ರಾಜ್ಯಾಧ್ಯಕ್ಷ ಹುದ್ದೆಗೆ ಘೋಷಣೆ ಮಾಡುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ಇದರ ಬಗ್ಗೆ ಇನ್ನೂ ಅಧಿಕೃತ ಮಾಹಿತಿಗಳು ಹೊರಬಿದ್ದಿಲ್ಲವಾದರೂ, ಬಿಜೆಪಿ ಮೂಲಗಳು ಯತ್ನಾಳ್ ಅವರನ್ನು ರಾಜ್ಯಾಧ್ಯಕ್ಷರಾಗಿ ನೋಡಲು ಉತ್ಸುಕರಾಗಿದ್ದಾರೆ.