ಪುತ್ತೂರು: ಕರ್ನಾಟಕದ ಹೆಚ್ಚುವರಿ ಅಡ್ವೋಕೇಟ್ ಜನರಲ್ ಆಗಿದ್ದ ಅರುಣ್ ಶ್ಯಾಮ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಪುತ್ತೂರು ಮೂಲದವರಾಗಿರುವ ಅರುಣ್ ಶ್ಯಾಮ್ ಸೋಮವಾರ ರಾಜಭವನಕ್ಕೆ ತೆರಳಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ರಾಜೀನಾಮೆ ಪತ್ರ ನೀಡಿದ್ದಾರೆ.
ಹೈಕೋರ್ಟ್ನ ಹಿರಿಯ ನ್ಯಾಯವಾದಿಯಾಗಿರುವ ಅರುಣ್ ಶ್ಯಾಮ್ ಅವರನ್ನು ಎರಡೂವರೆ ವರ್ಷಗಳ ಹಿಂದೆ ಬಿಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದ ಸಂದರ್ಭ ಹೆಚ್ಚುವರಿ ಅಡ್ವೋಕೇಟ್ ಜನರಲ್ ಆಗಿ ನೇಮಕ ಮಾಡಲಾಗಿತ್ತು. ಇದೀಗ ವಿಧಾನಸಭಾ ಚುನಾವಣೆ ಫಲಿತಾಂಶ ಪ್ರಕಟಗೊಂಡು ಕಾಂಗ್ರೆಸ್‌ಗೆ ಬಹುಮತ ದೊರೆಯುÄತ್ತಿದ್ದಂತೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
























