ಎಸ್ಸೆಸೆಲ್ಸಿ ಪೂರಕ ಪರೀಕ್ಷೆ ಅರ್ಜಿ, ಉತ್ತರ ಪತ್ರಿಕೆ ಸ್ಕ್ಯಾನ್ಡ್‌ ಪ್ರತಿ ಪಡೆಯಲು ದಿನಾಂಕ ವಿಸ್ತರಣೆ

ಬೆಂಗಳೂರು : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ಮಹತ್ವದ ಪ್ರಕಟಣೆಯನ್ನು ಹೊರಡಿಸಿದೆ. ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆ ನೋಂದಣಿ ಮಾಡಿಕೊಳ್ಳಲು ಮತ್ತು ಉತ್ತರ ಪತ್ರಿಕೆಗಳ ಸ್ಕ್ಯಾನ್ ಪ್ರತಿ ಪಡೆಯಲು ಅವಧಿಯನ್ನು ಮೇ 18 ರವರೆಗೆ ವಿಸ್ತರಿಸಿದೆ. ಈ ಹಿಂದೆ ಎಸ್‌ಎಸ್‌ಎಲ್‌ಸಿ ಉತ್ತರ ಪತ್ರಿಕೆಗಳ ಸ್ಕ್ಯಾನ್ ಪ್ರತಿ ಪಡೆಯಲು ಮೇ 14, 2023 ಕೊನೆಯ ದಿನಾಂಕವಾಗಿತ್ತು. ಹಾಗೂ ಪೂರಕ ಪರೀಕ್ಷೆಗೆ ನೋಂದಣಿ ಮಾಡಿಕೊಳ್ಳಲು ಮೇ 15, 2023 ಕೊನೆಯ ದಿನವಾಗಿದ್ದು, ಈಗ ಈ ದಿನಾಂಕವನ್ನು ಮೇ 18 ರವರೆಗೆ ವಿಸ್ತರಿಸಲಾಗಿದೆ.

ಅಭ್ಯರ್ಥಿಗಳು ಹಾಗೂ ಪಾಲಕರ ಒತ್ತಾಯದ ಮೇರೆಗೆ ಅವಧಿ ವಿಸ್ತರಿಸಲಾಗಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯ ನಿರ್ದೇಶಕರು ತಿಳಿಸಿದ್ದಾರೆ. ಇದು ಕೊನೆಯ ಅವಕಾಶವಾಗಿದ್ದು ಅಭ್ಯರ್ಥಿಗಳು ಈ ದಿನಾಂಕದೊಳಗೆ ನೋಂದಣಿ ಮಾಡಿಕೊಳ್ಳುವಂತೆ ಸೂಚಿಸಿದ್ದಾರೆ.
ಸ್ಕ್ಯಾನ್ ಪ್ರತಿ ಪಡೆಯಲು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳು ಶುಲ್ಕ ಪಾವತಿಸಲು 18-05-2023 ಕೊನೆಯ ದಿನವಾಗಿದೆ. ಡೆಬಿಟ್ ಕಾರ್ಡ್/ಕ್ರೆಡಿಟ್ ಕಾರ್ಡ್/ ಆನ್‌ಲೈನ್ ಬ್ಯಾಕಿಂಗ್ ಸೌಲಭ್ಯವಿಲ್ಲದವರು ಆನ್‌ಲೈನ್‌ನಲ್ಲಿ ಉತ್ತರ ಪತ್ರಿಕೆಗಳ ಸ್ಕ್ಯಾನ್ ಪ್ರತಿಯನ್ನು ಪಡೆಯಲು ಅರ್ಜಿ ಸಲ್ಲಿಸಿದ ನಂತರ ಆಫ್‌ಲೈನ್ ಚಲನ್ ಡೌನ್‌ಲೋಡ್ ಮಾಡಿಕೊಂಡು ಶುಲ್ಕವನ್ನು ಬೆಂಗಳೂರು ಒನ್, ಕರ್ನಾಟಕ ಒನ್, ಗ್ರಾಮ ಒನ್ ನಲ್ಲಿ ಬ್ಯಾಂಕಿಗ್ ಪಾವತಿಸಬಹುದಾಗಿದೆ.

ಉತ್ತರ ಪತ್ರಿಕೆಗಳ ಸ್ಕ್ಯಾನ್ಡ್ ಪ್ರತಿ ಪಡೆಯಲು ಅರ್ಜಿ ಸಲ್ಲಿಸುವ ವಿಧಾನ







































 
 

ಇಲಾಖೆಯ ವೆಬ್‌ಸೈಟ್‌ https://kseab.karnataka.gov.in ಭೇಟಿ ನೀಡಿ.
ಓಪನ್‌ ಆದ ಮುಖಪುಟದಲ್ಲಿ Application for scanned copies, Revolution / Re totaling ಎಂದು ಇರುತ್ತದೆ ಆ ಲಿಂಕ್‌ ಮೇಲೆ ಕ್ಲಿಕ್‌ ಮಾಡಿ.
ನಂತರ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ನೋಂದಣಿ ಸಂಖ್ಯೆ ನಮೂದಿಸಿ. ತಕ್ಷಣವೇ ವಿದ್ಯಾರ್ಥಿಗಳ ಮಾಹಿತಿ ಲಭ್ಯವಾಗುತ್ತದೆ.
scanned copy ಪಡೆಯಲು ಇಚ್ಛಿಸಿದ ವಿಷಯಗಳನ್ನು ಒಂದೇ ಬಾರಿಗೆ ಆಯ್ಕೆ ಮಾಡಿಕೊಂಡು, ನಿಖರವಾದ ಮೊಬೈಲ್‌ ಸಂಖ್ಯೆ, ನಿಮ್ಮ ಇ-ಮೇಲ್‌ ಐಡಿ ಹಾಗೂ ಸ್ವ ವಿಳಾಸವನ್ನು ನಮೂದಿಸಿ.ನಂತರ Submit ಬಟನ್‌ ಮೇಲೆ ಕ್ಲಿಕ್‌ ಮಾಡಿ.ನಂತರ ಕೂಡಲೇ ಚಲನ್‌ ಸಂಖ್ಯೆಯು Auto generate ಆಗುತ್ತದೆ.

Make payment ಬಟನ್‌ ಕ್ಲಿಕ್‌ ಮಾಡಿದ ನಂತರ Cash payment or Online payment ನಲ್ಲಿ ಯಾವುದಾದರೂ ಒಂದನ್ನ ಆಯ್ಕೆ ಮಾಡಿಕೊಳ್ಳಿ.
ನಿಗದಿಯಾಗಿರುವ ಶುಲ್ಕವನ್ನು ಆನ್‌ಲೈನ್ ಮೂಲಕ ಬೆಂಗಳೂರು ಒನ್‌, ಕರ್ನಾಟಕ ಒನ್‌ ಅಥವಾ ಯೂನಿಯನ್‌ ಬ್ಯಾಂಕ್‌ ಆಫ್‌ ಇಂಡಿಯಾ ಇದರಲ್ಲಿ ಯಾವುದಾದರೂ ಒಂದನ್ನ ಆಯ್ಕೆ ಮಾಡಿಕೊಂಡು generate challan ಬಟನ್‌ ಮೇಲೆ ಕ್ಲಿಕ್‌ ಮಾಡಿ.
ಚಲನ್‌ನಲ್ಲಿ ನೀವು ದಾಖಲಿಸಿದ ಮಾಹಿತಿ ಬರುತ್ತದೆ. ಆ ಚಲನ್‌ ಪ್ರಿಂಟ್‌ ತೆಗೆದುಕೊಳ್ಳಿ.ಚಲನ್ ಪ್ರಿಂಟ್‌ ತೆಗೆದುಕೊಂಡ ಬಳಿಕೆ ನಿಗದಿತ ದಿನಾಂಕದೊಳಗೆ ಶುಲ್ಕವನ್ನು ಸಂದಾಯ ಮಾಡಿ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top