ಚಪ್ಪಲಿ ಹಾರ ಹಾಕಿದ ಆರೋಪಿಗಳಿಗೆ ಪೊಲೀಸ್ ದೌರ್ಜನ್ಯದ ಆರೋಪ | ಫೊಟೋಗಳ ಬಗ್ಗೆ ಹೇಳಿಕೆ ನೀಡಿದ ಪುತ್ತೂರು ಡಿವೈಎಸ್ಪಿ

ಪುತ್ತೂರು: ಬಿಜೆಪಿ ನಾಯಕರ ಭಾವಚಿತ್ರವಿರುವ ಬ್ಯಾನರಿಗೆ ಚಪ್ಪಲಿ ಹಾರ ಹಾಕಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಂಧಿತರಾದ ಆರೋಪಿಗಳಿಗೆ ಪೊಲೀಸರು ದೌರ್ಜನ್ಯ ಎಸಗಿದ್ದಾರೆ ಎಂಬ ಫೊಟೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹಾಗೂ ಮಾಜಿ ಸಿಎಂ ಡಿ.ವಿ. ಸದಾನಂದ ಗೌಡ ಅವರ ಭಾವಚಿತ್ರವನ್ನು ಹಾಕಿ, ಅದರಲ್ಲಿ ಭಾವಪೂರ್ಣ ಶ್ರದ್ಧಾಂಜಲಿ ಎಂಬ ಶೀರ್ಷಿಕೆ ನೀಡಿ, ಅದಕ್ಕೆ ಚಪ್ಪಲಿ ಹಾರ ಹಾಕಿದ ಘಟನೆ ನಡೆದಿತ್ತು. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಒಟ್ಟು 9 ಮಂದಿ ಆರೋಪಿಗಳನ್ನು ಪೊಲೀಸರು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಿದ್ದರು.

ಪೊಲೀಸರಿಂದ ದೌರ್ಜನ್ಯಕ್ಕೆ ಒಳಗಾಗಿದ್ದಾರೆ ಎನ್ನುವ ಯುವಕರ ಫೊಟೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ನಡೆದಾಡಲು ಕಷ್ಟಪಡುವ ರೀತಿಯ ವೀಡಿಯೋ ತುಣುಕುಗಳು ಸಾಮಾಜಿಕ ಜಾಲತಾಣದಲ್ಲಿ ಕಂಡುಬಂದಿದೆ.







































 
 

ಈ ಬಗ್ಗೆ ಡಿವೈಎಸ್ಪಿ ಅವರಲ್ಲಿ ವಿಚಾರಿಸಿದಾಗ, ನನಗೂ ಆಶ್ಚರ್ಯಕರವಾಗಿದೆ. ಇದರ ಬಗ್ಗೆ ನನಗೇನೂ ತಿಳಿಯದು. ಇದರ ಬಗ್ಗೆ ವಿಚಾರಣೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top