ಪುತ್ತೂರು: ರಾಜ್ಯದ ಮುಖ್ಯಮಂತ್ರಿಯಾಗಿ ಸಿದ್ಧರಾಮಯ್ಯ ಹಾಗೂ ಉಪ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ನೇಮಕವಾಗಿದ್ದು, ಮೇ 20ರಂದು ಮಧ್ಯಾಹ್ನ 12.30ಕ್ಕೆ ಪ್ರಮಾಣವಚನ ನಡೆಯಲಿದೆ ಎಂದು ಎಐಸಿಸಿ ಪ್ರ. ಕಾರ್ಯದರ್ಶಿ ರಣದೀಪ್ ಸುರ್ಜೆವಾಲಾ ಮಾಹಿತಿ ನೀಡಿದ್ದಾರೆ.
ಇದೇ ಸಂದರ್ಭ ಕೆಲ ಸಚಿವರ ಪ್ರಮಾಣವಚನವೂ ನಡೆಯಲಿದೆ.
ನವದೆಹಲಿಯಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಅವರು ಮಾತನಾಡಿದರು.