ಬೆಂಗಳೂರು: ಸಿದ್ದರಾಮಯ್ಯ ಎಂಬ ಹೆಸರಿನ ನಾನು… ಎಂದು ಮುಖ್ಯಮಂತ್ರಿ ಹುದ್ದೆಯ ಪ್ರಮಾಣವಚನವನ್ನು ಸಿದ್ದರಾಮಯ್ಯ ಅವರು ದೇವರ ಹೆಸರಿನಲ್ಲಿ ಕೈಗೊಂಡರು.
ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ನಡೆದ ಪ್ರಮಾಣವಚನ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರಮಾಣ ಬೋಧಿಸಿದರು. ಇತ್ತ ಕಡೆ ಪ್ರಮಾಣವಚನ ಬೋಧಿಸುತ್ತಿದ್ದಂತೆ, ಇನ್ನೊಂದೆಡೆ ಮುಖ್ಯಮಂತ್ರಿ ಕಚೇರಿಯಲ್ಲಿ ಸಿದ್ದರಾಮಯ್ಯ ಅವರ ಹೆಸರಇನ ನಾಮಫಲಕವನ್ನು ಅಳವಡಿಸಲಾಯಿತು. ಬಳಿಕ ಡಿಕೆ ಶಿವಕುಮಾರ್ ಅವರು ಡಿಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದರು.
ಸಮಾರಂಭದಲ್ಲಿ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಎನ್.ಸಿ.ಪಿ. ಮುಖ್ಯಸ್ಥ ಶರದ್ ಪವಾರ್, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮಧ್ಯಪ್ರದೇಶ ಸಿಎಂ, ತಮಿಳುನಾಡು ಸಿಎಂ, ಬಿಹಾರ ಸಿಎಂ, ರಾಜಸ್ಥಾನ ಸಿಎಂ, ಜಮ್ಮು ಕಾಶ್ಮೀರ ಮಾಜಿ ಸಿಎಂ, ಪುದುಚೇರಿ ಮಾಜಿ ಸಿಎಂ, ನಟ ಕಮಲಹಾಸನ್ ಮೊದಲಾದವರು ಉಪಸ್ಥಿತರಿದ್ದರು.