ಬೆಂಗಳೂರು : ರಾಜ್ಯದ ನೂತನ ಅಡ್ವೊಕೇಟ್ ಜನರಲ್ ಆಗಿ ಹಿರಿಯ ವಕೀಲ ಶಶಿಕಿರಣ್ ಶೆಟ್ಟಿ ಅವರನ್ನು ನೇಮಕ ಮಾಡಲಾಗಿದೆ ಎಂದು ವರದಿಯಾಗಿದೆ.
ಇತ್ತೀಚೆಗೆ ಅಡ್ವೊಕೇಟ್ ಜನರಲ್ ಸ್ಥಾನಕ್ಕೆ ಪ್ರಭುಲಿಂಗ ನಾವದಗಿ ಅವರು ರಾಜೀನಾಮೆ ನೀಡಿದ್ದರು. ಇದರಿಂದ ತೆರವಾದ ಸ್ಥಾನಕ್ಕೆ ಶಶಿಕಿರಣ್ ಶೆಟ್ಟಿ ಅವರನ್ನು ನೇಮಕ ಮಾಡಲಾಗಿದೆ.
ಈ ಸಂಬಂಧ ಅಧಿಕೃತ ಆದೇಶ ಹೊರಬೀಳಬೇಕಿದ್ದು, ನಿವೃತ್ತ ನ್ಯಾಯಮೂರ್ತಿ ಪಿ.ವಿಶ್ವನಾಥ್ ಶೆಟ್ಟಿ ಅವರ ಪುತ್ರನೂ ಆಗಿರುವ ಶಶಿಕಿರಣ್ ಶೆಟ್ಟಿ ಅವರು ಶಾಸಕರ ಅನರ್ಹತೆ ಸೇರಿ ಹಲವು ಮಹತ್ವದ ಪ್ರಕರಣಗಳನ್ನು ನಿರ್ವಹಿಸಿದ್ದರು.