ಬೆಂಗಳೂರು : ರಾಜ್ಯದ 16ನೇ ವಿಧಾನಸಭೆಯ ಮೊಟ್ಟ ಮೊದಲ ವಿಶೇಷ ಅಧಿವೇಶನದಲ್ಲಿ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರು ಪ್ರಮಾಣವಚನ ಸ್ವೀಕಾರ ಮಾಡಿದರು.
ಮೇ 24ರಿಂದ ರಾಜ್ಯದ ವಿಧಾನಸಭೆ ಅಧಿವೇಶನ ಪ್ರಾರಂಭವಾಗಿದ್ದು, 3 ದಿನಗಳ ಕಾಲ ಅಧಿವೇಶನ ನಡೆಯಲಿದೆ. ವಿಧಾನಸಭೆ ಚುನಾವಣೆಯಲ್ಲಿ ಜನರಿಂದ ಆಯ್ಕೆಯಾದ ಜನಪ್ರತಿನಿಧಿಗಳು ಶಾಸಕರಾಗಿ ಪ್ರಮಾಣವಚನ ಸ್ವೀಕಾರ ಮಾಡುವ ಜೊತೆಗೆ ಸಭಾಪತಿ ಅವರ ಆಯ್ಕೆಯೂ ಇದರಲ್ಲಿ ನಡೆಯಲಿದೆ.
ಪುತ್ತೂರು ಕ್ಷೇತ್ರದ ಶಾಸಕ ಅಶೋಕ್ ಕುಮಾರ್ ರೈ ಕೊಡಿಂಬಾಡಿ ಅವರು ಬೆಂಗಳೂರಿನಲ್ಲಿ ನಡೆದ ಮೊದಲ ಅಧಿವೇಶನದಲ್ಲಿ ಭಗವಂತನ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು.