ಪುತ್ತೂರು : ವಿದ್ಯುತ್ ಸ್ಪರ್ಶಗೊಂಡ ಪರಿಣಾಮ ಯುವಕನೋರ್ವ ಸಾವನ್ನಪ್ಪಿದ ಘಟನೆ ಹಿರೇಬಂಡಾಡಿ ಗ್ರಾಮದ ಅಡೆಕ್ಕಲ್ ಕುಮಾರಧಾರ ನದಿ ತೀರದ ಬಳಿ ನಡೆದಿದೆ.
ಶರೀಫುದ್ದೀನ್ (19) ವಿದ್ಯುತ್ ಶಾಕ್ನಿಂದ ಮೃತಪಟ್ಟ ಯುವಕ.
ಹಮ್ಮಬ್ಬ ಎಂಬವರ ಅಳಿಯ ಶರೀಪುದ್ದೀನ್ , ದ್ವಿತಿಯ ಪಿಯುಸಿ ಪರೀಕ್ಷೆಯಲ್ಲಿ ಪಾಸಾಗಿದ್ದು, ಮೇ.21 ರಂದು ಸಂಜೆ ಪುತ್ತೂರು ತಾಲೂಕು ಹಿರೇಬಂಡಾಡಿ ಗ್ರಾಮದ ಅಡೆಕ್ಕಲ್ ಕುಮಾರಧಾರ ನದಿ ಕಿನಾರೆಯ ಬಳಿ ವಿದ್ಯುತ್ ಸ್ಪರ್ಶವಾಗಿ ಅಸ್ವಸ್ಥಗೊಂಡವರನ್ನು ಸಾರ್ವಜನಿಕರ ಮೂಲಕ ಪುತ್ತೂರು ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ ಎಂಬ ಬಗ್ಗೆ ಮಾಹಿತಿ ಬಂದಿದ್ದು, ಪುತ್ತೂರು ಸರಕಾರಿ ಆಸ್ಪತ್ರೆಗೆ ತೆರಳಿ ನೋಡಿದಾಗ ಅಳಿಯ ಶರೀಪುದ್ದೀನ್ ಮೃತಪಟ್ಟಿದ್ದು ಆತನ ಎದೆಯ ಭಾಗದಲ್ಲಿ ವಿದ್ಯುತ್ ಸ್ಪರ್ಶ ಆಗಿರುವುದು ಕಂಡು ಬಂದಿರುವುದಾಗಿ ತಿಳಿಸಿದ್ದಾರೆ.
ಸಂಬಂಧಿಯೋರ್ವ ನೀಡಿದ ದೂರಿನಂತೆ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.