ಪುತ್ತೂರು: ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಆಶ್ರಯದಲ್ಲಿ ಡಿ. ೨೪ರಂದು ಫ್ಯಾಕಲ್ಟಿ ಡೆವಲಪ್‌ಮೆಂಟ್ ಕಾರ್ಯಕ್ರಮ ಹಾಗೂ ಹೆತ್ತವರೊಂದಿಗೆ ಸಂವಾದ ನಡೆಯಲಿದೆ.
ಅಂತಾರಾಷ್ಟ್ರೀಯ ತರಬೇತುದಾರ, ಶಿಕ್ಷಣ ತಜ್ಞ ಡಾ. ಗುರುರಾಜ ಕರಜಗಿ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ. ಬೆಳಗ್ಗೆ 9ಕ್ಕೆ ಡಾ.ಕರಜಗಿ ಕಾರ್ಯಕ್ರಮ ಉದ್ಘಾಟಿಸಿ, ವಿದ್ಯಾರ್ಥಿಗಳೊಂದಿಗೆ ಮಾತುಕತೆ ನಡೆಸುವರು. ತದನಂತರ 10.30ರಿಂದ 12.30ರ ವರೆಗೆ ಶಿಕ್ಷಕರೊಂದಿಗೆ ಸಂವಾದ ನಡೆಸಲಿದ್ದಾರೆ.
ಅಪರಾಹ್ನ 1.30ರಿಂದ ಹೆತ್ತವರೊಂದಿಗೆ ಡಾ. ಗುರುರಾಜ ಕರಜಗಿ ಸಂವಾದ ನಡೆಸಲಿದ್ದು, ಸಾರ್ವಜನಿಕರಿಗೂ ಮುಕ್ತ ಅವಕಾಶ ಕಲ್ಪಿಸಿಕೊಡಲಾಗಿದೆ. ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಸುಬ್ರಹ್ಮಣ್ಯ ನಟ್ಟೋಜ ಪೂರ್ವಾಹ್ನ ಮತ್ತು ಅಪರಾಹ್ನದ ಕಾರ್ಯಕ್ರಮಗಳ ಅಧ್ಯಕ್ಷತೆ ವಹಿಸಲಿದ್ದಾರೆ. ವಿಶ್ರಾಂತ ಪ್ರಾಚಾರ್ಯ ಹಾಗೂ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಸದಸ್ಯ ಡಾ. ಎಚ್. ಮಾಧವ ಭಟ್ ಅವರು ಹೆತ್ತವರೊಂದಿಗಿನ ಸಂವಾದ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ವಿಶ್ರಾಂತ ಪ್ರಾಚಾರ್ಯ ಡಾ. ಎಂ.ಸಿ. ಪ್ರಕಾಶ್ ಹಾಗೂ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕೋಶಾಧಿಕಾರಿ ರಾಜಶ್ರೀ ಎಸ್. ನಟ್ಟೋಜ ಉಪಸ್ಥಿತರಿರುವರು. ಪೂರ್ವಾಹ್ನ ಹಾಗೂ ಅಪರಾಹ್ನದ ಕಾರ್ಯಕ್ರಮಗಳು ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯ ಆವರಣದಲ್ಲಿನ ಶ್ರೀ ಶಂಕರ ಸಭಾಭವನದಲ್ಲಿ ನಡೆಯಲಿವೆ ಎಂದು ಪ್ರಕಟಣೆ ತಿಳಿಸಿದೆ.