ಪುತ್ತೂರು : ಹಿಂದೂ ಕಾರ್ಯಕರ್ತರ ಮೇಲೆ ಗೂಂಡಾ ರಾಜಕಾರಣದ ಮುಖಾಂತರ ಪ್ರತೀಕಾರ ತೀರಿಸುವಂತಹ ಲಕ್ಷಣ ಕಾಣಿಸುತ್ತಿದೆ. ಇದನ್ನು ಹಿಂದೂ ಸಂಘಟನೆ ಸಹಿಸುವುದಿಲ್ಲ. ಸಂಘಟನೆ ಕಾರ್ಯಕರ್ತರಿಗೆ ಹಲ್ಲೆ ನಡೆಸಿರುವುದನ್ನು ತೀವ್ರವಾಗಿ ಖಂಡಿಸುತ್ತೇವೆ ಎಂದು ವಿಶ್ವ ಹಿಂದೂ ಪರಿಷದ್ ಬಜರಂಗದಳ ಮುಖಂಡರಾದ ಮುರಳಿಕೃಷ್ಣ ಹಸಂತಡ್ಕ ತಿಳಿಸಿದ್ದಾರೆ.
ಬಜರಂಗದಳ, ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾಣಿ ಪೇಟೆಯಲ್ಲಿ ಜಗಳ ನಡೆದಿದ್ದು, ಈ ಬಗ್ಗೆ ಅವರು ಪ್ರತಿಕ್ರಿಯಿಸಿದ್ದಾರೆ.
ಅಹಿತಕರ ಘಟನೆ ನಡೆಯುವ ಮೊದಲು ನಡುರಸ್ತೆಯಲ್ಲಿ ಹಲ್ಲೆ ಮಾಡುವಂತಹ ಕೆಲಸವನ್ನು ಯಾರೂ ಮಾಡಿದ್ದಾರೋ ಅವರ ವಿರುದ್ಧ ಪೇಟೆಯಲ್ಲಿರುವ ಕ್ಯಾಮರಾಗಳನ್ನು ಪರಿಶೀಲಿಸಿ ಶೀಘ್ರ ಕ್ರಮಕೈಗೊಳ್ಳುವಂತೆ ಪೊಲೀಸ್ ಇಲಾಖೆಯನ್ನು ಆಗ್ರಹಿಸಿದರು.
ರಸ್ತೆಯಲ್ಲಿ ಗೂಂಡಾ ರಾಜಕಾರಣ ಮಾಡುವಂತದ್ದನ್ನು ಪೊಲೀಸ್ ಇಲಾಖೆ ತಡೆಯಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಸಂಘ-ಪರಿವಾರ ಹೋರಾಟದ ಮೂಲಕ ಉತ್ತರ ನೀಡಲಿದ್ದೇವೆ ಎಂದು ಅವರು ಹೇಳಿದರು.