ಪುತ್ತೂರು: ಬೆಳಂದೂರು ಗ್ರಾಪಂ ಮಾಜಿ ಅಧ್ಯಕ್ಷ ಕರುಣಾಕರ ಪೂಜಾರಿ ಪಟ್ಟೆ ಅಲ್ಪ ಕಾಲದ ಅಸೌಖ್ಯದಿಂದ ಶನಿವಾರ ನಿಧನರಾದರು.
ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಾಜಿ ಅಧ್ಯಕ್ಷರಾಗಿ, ಸವಣೂರು ಸ.ಉ.ಹಿ. ಪ್ರಾಥಮಿಕ ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ರಾಜಕೀಯ, ಸಾಮಾಜಿಕ, ಧಾರ್ಮಿಕ ಕ್ಷೇತ್ರದಲ್ಲಿ ಸಕ್ರಿಯಾಗಿದ್ದು, ವೃತ್ತಿಯಲ್ಲಿ ಪಿಡಬ್ಲ್ಯೂಡಿ ಗುತ್ತಿಗೆದಾರರಾಗಿದ್ದರು.
ಮೃತರು ತಾಯಿ, ಪತ್ನಿ, ಮಕ್ಕಳು ಹಾಗೂ ಅಪಾರ ಬಂಧು ಬಳಗದವರನ್ನು ಅಗಲಿದ್ದಾರೆ.