ಪುತ್ತೂರು : ಪ್ರವೀಣ್ ನೆಟ್ಟಾರು ರವರ ಪತ್ನಿ ನೂತನ ಕುಮಾರಿ ರವರನ್ನು ಕೆಲಸದಿಂದ ಬಿಡುಗಡೆಗೊಳಿಸಿ ಆದೇಶ ಹೊರಡಿಸಲಾಗಿರುವ ವಿಚಾರ ಈಗಾಗಲೇ ವರದಿಯಾಗಿದ್ದು, ಈ ಕುರಿತು ಮುಖ್ಯಮಂತ್ರಿಗಳ ಜತೆ ಮತನಾಡುವೆ ಎಂದು ಪುತ್ತೂರು ಶಾಸಕ ಅಶೋಕ್ ರೈ ಪ್ರತಿಕ್ರಿಯೆ ನೀಡಿದ್ದಾರೆ.
ಪ್ರವೀಣ್ ನೆಟ್ಟಾರು ಪತ್ನಿ ನೂತನ ಕುಮಾರಿ ರವರನ್ನು ಕೆಲಸದಿಂದ ವಜಾಗೊಳಿಸಿ ಆದೇಶ ಹೊರಡಿಸಲಾಗಿದೆ ಎಂಬ ಬಗ್ಗೆ ಮಾಧ್ಯಮ ವರದಿಯನ್ನು ನೋಡಿದ ಬಳಿಕ ನನಗೆ ತಿಳಿದಿದೆ. ಪ್ರಸಕ್ತ ಮುಖ್ಯಮಂತ್ರಿ ಇರುವ ತನಕ ಇಲ್ಲವೇ ಮುಂದಿನ ಆದೇಶದವರೆಗೆ ಎಂದು ನಮೂದಿಸಿದ್ದು,ಇದು ಹಿಂದಿನ ಬಿಜೆಪಿ ಸರಕಾರದ ತಪ್ಪಾಗಿದೆ.
ನಾನು ಈ ಬಗ್ಗೆ ಕೂಡಲೇ ಮುಖ್ಯಮಂತ್ರಿಯವರಲ್ಲಿ ಮಾತನಾಡಿದ ಶೀಘ್ರ ಮರು ನೇಮಕಾತಿ ಬಗ್ಗೆ ಪ್ರಸ್ತಾಪಿಸುವುದಾಗಿ ಅವರು ತಿಳಿಸಿದ್ದಾರೆ.