ಕಡಬ: ಮಕ್ಕಳಲ್ಲಿ ಓದುವ ಹವ್ಯಾಸವನ್ನು ಹೆಚ್ಚಿಸುವ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದ ಸದುಪಯೋಗವನ್ನು ಗ್ರಾ.ಪಂ. ವ್ಯಾಪ್ತಿಯ ಎಲ್ಲಾ ಮಕ್ಕಳು ಪಡೆದುಕೊಳ್ಳಬೇಕು. ಆ ಮೂಲಕ ಮುಂದಿನ ದಿನಗಳಲ್ಲಿ ಉತ್ತಮ ಸಮಾಜ ನಿರ್ಮಾಣ ಮಾಡುವಲ್ಲಿ ಯಶಸ್ವಿಯಾಗಬೇಕು ಎಂದು ಕಾಣಿಯೂರು ಗ್ರಾ.ಪಂ. ಉಪಾಧ್ಯಕ್ಷ ಗಣೇಶ್ ಉದನಡ್ಕ ಹೇಳಿದರು.
ಕಾಣಿಯೂರು ಗ್ರಾ.ಪಂ. ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರದ ವತಿಯಿಂದ ಕಾಣಿಯೂರು ಗ್ರಾ.ಪಂ.ಸಭಾಂಗಣದಲ್ಲಿ ನಡೆದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.
ಗ್ರಾ.ಪಂ. ಸದಸ್ಯರಾದ ರಾಮಣ್ಣ ಗೌಡ ಮುಗರಂಜ, ವಸಂತ ಪೆರ್ಲೋಡಿ, ಗ್ರಾ.ಪಂ. ಅಭಿವೃಧಿ ಅಧಿಕಾರಿ ದೇವರಾಜ್, ಸಂಜೀವಿನಿ ಒಕ್ಕೂಟದ ಎಂ.ಬಿ.ಕೆ. ಸುಮನ, ಸಿಬ್ಬಂದಿಗಳಾದ ತಿಮ್ಮಪ್ಪ ಗೌಡ ಬೀರುಕುಡಿಕೆ, ಕುಮಾರ್, ಕೀರ್ತಿ ಕುಮಾರ್, ಶಶಿಕಲಾ ಹಾಗೂ ಮಕ್ಕಳು, ಮಕ್ಕಳ ಪೋಷಕರು ಉಪಸ್ಥಿತರಿದ್ದರು.
ಗ್ರಂಥಾಲಯ ಮೇಲ್ವಿಚಾರಕಿ ಪಾರ್ವತಿ ಸ್ವಾಗತಿಸಿ, ವಂದಿಸಿ, ಕಾರ್ಯಕ್ರಮ ನಿರೂಪಿಸಿದರು.