ಪುತ್ತೂರು: ಸೋಮವಾರ ಹಾಡಹಗಲೇ ಮನೆಯಿಂದ ಕಳ್ಳತನ ನಡೆಸಿರುವ ಘಟನೆ ಬನ್ನೂರಿನಲ್ಲಿ ನಡೆದಿದೆ.
ಬನ್ನೂರು ಕುಂಟ್ಯಾನ ಸದಾಶಿವ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ಮೌನಿಶ್ ಎಂಬವರ ಮನೆಯಲ್ಲಿ ಯಾರೂ ಇಲ್ಲದ ವೇಳೆ ಈ ಘಟನೆ ನಡೆದಿದೆ.
ಸೋಮವಾರ ಮಧ್ಯಾಹ್ನ 12 ಗಂಟೆಗೆ ಮನೆಯವರು ಬಂದಾಗ ಮನೆ ಹಿಂಭಾಗ ಬೀಗ ಮುರಿದು ಕಳ್ಳರು ಒಳಹೊಕ್ಕು ಕಳ್ಳತನ ಮಾಡಿರುವುದು ಗಮನಕ್ಕೆ ಬಂದಿದೆ. ಮನೆಯ ವಸ್ತುಗಳೆಲ್ಲಾ ಚಿಲ್ಲಾಪಿಲ್ಲಿಯಾಗಿ ಬಿದ್ದಿದ್ದು ಪೊಲೀಸರಿಗೆ ದೂರು ನೀಡಲಾಗಿದೆ. ಬೆರಳಚ್ಚು ತಜ್ಞರು ಮತ್ತು ಶ್ವಾನದಳ ಘಟನಾ ಸ್ಥಳಕ್ಕೆ ಆಗಮಿಸಿದ್ದು ತನಿಖೆ ನಡೆಯುತ್ತಿದೆ.