ಪುತ್ತೂರು: ಶಾಂತಿಗೋಡು ಗ್ರಾಮದ ಆನಡ್ಕ ಶಾಲಾ ಪ್ರಾರಂಭೋತ್ಸವ ಬುಧವಾರ ನಡೆಯಿತು.
ನರಿಮೊಗರು ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಸುಧಾಕರ ಕುಲಾಲ್, ಎಸ್ ಡಿ ಎಂ ಸಿ ಅಧ್ಯಕ್ಷ ನಾರಾಯಣ ಸುವರ್ಣ, ಗ್ರಾಮ ಪಂಚಾಯಿತಿ ಸದಸ್ಯ ಎಂ. ದಿನೇಶ್ ಎಸ್ ಡಿ ಎಂ ಸಿ ಸದಸ್ಯರು ಮತ್ತು ಪೋಷಕರ ಉಪಸ್ಥಿತಿಯಲ್ಲಿ ಶಾಲಾರಂಭದ ಸಂಭ್ರಮ ನಡೆಯಿತು.
ಹೊಸದಾಗಿ ಸೇರ್ಪಡೆಗೊಂಡ ವಿದ್ಯಾರ್ಥಿಗಳನ್ನು ಆರತಿ ಬೆಳಗಿ , ಗುಲಾಬಿ ಹೂವು ಕೊಟ್ಟು ವಾದ್ಯ ಘೋಷದೊಂದಿಗೆ ಸ್ವಾಗತಿಸಲಾಯಿತು. ಮಕ್ಕಳಿಗೆ ಫೈಲ್ , ಬರವಣಿಗೆ ಪುಸ್ತಕ , ಬರವಣಿಗೆ ಕಿಟ್ ಮತ್ತು ಸಿಹಿ ನೀಡಿ, ಬಣ್ಣದೊಂದಿಗೆ ಆಟವಾಡಿಸಿ ಸಂತೋಷಗೊಳಿಸಲಾಯಿತು.
ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಸರಕಾರದಿಂದ ನೀಡಲಾದ ಉಚಿತ ಸಮವಸ್ತ್ರ ಮತ್ತು ಪಠ್ಯಪುಸ್ತಕಗಳನ್ನು ವಿತರಿಸಲಾಯಿತು.
ಸಮಾರಂಭದ ಅಧ್ಯಕ್ಷ ನಾರಾಯಣ ಸುವರ್ಣ, ಸುಧಾಕರ್ ಕುಲಾಲ್ ಮತ್ತು ಎಂ ದಿನೇಶ್ ಶುಭ ಹಾರೈಸಿದರು. ಶಾಲಾ ಮುಖ್ಯ ಶಿಕ್ಷಕಿ ಶುಭಲತಾ ಪ್ರಸ್ತಾವಿಕವಾಗಿ ಮಾತನಾಡಿದರು. ಸಹಶಿಕ್ಷಕಿ ಫೆಲ್ಸಿಟಾ ಡಿಕುನ್ಹಾ ಸ್ವಾಗತಿಸಿ, ಮಾಲತಿ ವಂದಿಸಿದರು. ಅಕ್ಷತಾ ಕಾರ್ಯಕ್ರಮ ನಿರೂಪಿಸಿದರು.