ಸುಬ್ರಹ್ಮಣ್ಯ : ಮನೆಯ ಮೇಲ್ಛಾವಣಿಯಿಂದ ಬಿದ್ದು ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಸುಬ್ರಹ್ಮಣ್ಯ ಸಮೀಪದ ನೆಟ್ಟಣದಲ್ಲಿ ಶುಕ್ರವಾರ ನಡೆದಿದೆ.
ಮೃತರನ್ನು ಅಲಂಕಾರು ಗ್ರಾಮದ ಶರವೂರು ನಿವಾಸಿ ಪದ್ಮನಾಭ ಎಂಬವರ ಪುತ್ರ ಹರಿಪ್ರಸಾದ್ ಎಂದು ಗುರುತಿಸಲಾಗಿದೆ.
ನೆಟ್ಟಣದ ಮೇರೊಂಜಿ ಎಂಬಲ್ಲಿ ನಿರ್ಮಾಣ ಹಂತದ ಮನೆಯ ಮೇಲ್ಛಾವಣಿಯ ಒಂದು ಪಾರ್ಶ್ವ ಕುಸಿದ ಪರಿಣಾಮ ಹರಿಪ್ರಸಾದ್ ಕೆಳಗೆ ಬಿದ್ದಿದ್ದು, ಗಂಭೀರವಾಗಿ ಗಾಯಗೊಂಡಿದ್ದರು. ತಕ್ಷಣವೇ ಹರಿಪ್ರಸಾದ್ ಅವರನ್ನು ಸ್ಥಳೀಯ ಯುವಕರು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಅದಾಗಲೇ ಅವರು ಮೃತಪಟ್ಟಿದ್ದರು ಎನ್ನಲಾಗಿದೆ.