ಪುತ್ತೂರು: ಆರ್ಯಾಪು ಗ್ರಾಮ ಪಂಚಾಯತ್ ಮಾಜಿ ಸದಸ್ಯ, ಹಿಂದೂ ಜಾಗರಣ ವೇದಿಕೆಯ ಪುತ್ತೂರು ತಾಲೂಕು ಘಟಕದ ಮಾಜಿ ಅಧ್ಯಕ್ಷ ರಮೇಶ್ ರೈ ಡಿಂಬ್ರಿ ಅವರು ಜೂ. ೩ರಂದು ಪುರಭವನದಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಕೃತಜ್ಞತಾ ಸಮರ್ಪಣಾ ಕಾರ್ಯಕ್ರಮದಲ್ಲಿ ಕಾಂಗ್ರೆಸ್‌ಗೆ ಸೇರ್ಪಡೆಯಾದರು.
ಹಿಂದೂ ಜಾಗರಣ ವೇದಿಕೆಯ ಪುತ್ತೂರು ತಾಲೂಕು ಘಟಕದ ಸಂಚಾಲಕರಾಗಿ, ಅಧ್ಯಕ್ಷರಾಗಿ ೧೨ ವರ್ಷ ಕಾರ್ಯ ನಿರ್ವಹಿಸಿದ್ದ ರಮೇಶ್ ರೈ ಅವರು ಬಳಿಕ ಆರ್ಯಾಪು ಗ್ರಾಮ ಪಂಚಾಯತ್ ಬಿಜೆಪಿ ಬೆಂಬಲಿತ ಸದಸ್ಯರಾಗಿ ಚುನಾಯಿತರಾಗಿದ್ದರು.
ಕುರಿಯ ಉಳ್ಳಾಲ ಶ್ರೀ ಮಹಾವಿಷ್ಣು ಮೂರ್ತಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ, ಪುತ್ತೂರು ಯುವ ಬಂಟರ ಸಂಘದ ಉಪಾಧ್ಯಕ್ಷರಾಗಿ, ಕೋಶಾಧಿಕಾರಿಯಾಗಿ, ಅಧ್ಯಕ್ಷರಾಗಿ, ಬಂಟರ ಸಂಘದ ನಿರ್ದೇಶಕರಾಗಿ, ಕೋಶಾಧಿಕಾರಿಯಾಗಿ ಕಾರ್ಯ ನಿರ್ವಹಿಸಿರುವ ರಮೇಶ್ ರೈ ಪ್ರಸ್ತುತ ಬಂಟರ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
























