ಹಿಂದೂಗಳ ಮೇಲೆ ದಬ್ಬಾಳಿಕೆ ನಡೆದರೆ ಹಿಂದೂ ಸಮಾಜ ತಕ್ಕ ಉತ್ತರ ನೀಡಲಿದೆ : ಅರುಣ್ ಕುಮಾರ್ ಪುತ್ತಿಲ

ಸುಳ್ಯ: ಹಿಂದೂ ಸಮಾಜದ ಮೇಲೆ ದಬ್ಬಾಳಿಕೆ, ದೌರ್ಜನ್ಯಗಳ ನಡೆದರೆ ಹಿಂದೂ ಸಮಾಜ ಅದಕ್ಕೆ ಹಿಂದೂ ಸಮಾಜ ತಕ್ಕ ಉತ್ತರ ನೀಡಲಿದೆ ಎಂದು ಹಿಂದೂ ಸಂಘಟನೆ ಮುಖಂಡ ಅರುಣ್ ಕುಮಾರ್ ಪುತ್ತಿಲ ಹೇಳಿದ್ದಾರೆ.

ಅವರು ಸುಳ್ಯದ ಜಾಲ್ಸೂರು ಗ್ರಾಮದ ಅಡ್ಯಾರು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಭಾನುವಾರ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ ವತಿಯಿಂದ ಲೋಕಕಲ್ಯಾಣಾರ್ಥವಾಗಿ ನಡೆದ ಶ್ರೀ ಸತ್ಯನಾರಾಯಣ ಪೂಜೆಯ ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದರು.

ಖಾಕಿ ವ್ಯವಸ್ಥೆಯಡಿ ದೌರ್ಜನ್ಯ ಎಸಗಬೇಡಿ. ಧಾರ್ಮಿಕ ವ್ಯವಸ್ಥೆ ಮತ್ತು ರಾಷ್ಟ್ರೀಯ ವಿಚಾರಧಾರೆಯಲ್ಲಿ ಕೆಲಸ ಮಾಡುವ ಹಿಂದೂ ಸಮಾಜದ ಕಾರ್ಯಕರ್ತರು ಬೀದಿ ಹೆಣವಾಗುತ್ತಿದ್ದಾರೆ ಎಂದ ಅವರು, ಹಿಂದೂ ಸಮಾಜದ ಶಕ್ತಿಯನ್ನು ಇಡೀ ಜಗತ್ತಿಗೆ ತೋರಿಸುವ ನಿಟ್ಟಿನಲ್ಲಿ ಆರ್ ಎಸ್ಎಸ್ ಇಂದು ಕೆಲಸ ಮಾಡುತ್ತಿದೆ. ಹಿಂದುತ್ವಕ್ಕಾಗಿ ಪ್ರಾಣ ತ್ಯಾಗಕ್ಕೂ ನಾನು ಸಿದ್ಧನಿದ್ದೇನೆ ಎಂದ ಅವರು, ಸತ್ಯನಾರಾಯಣ ಪೂಜೆಯಂತಹ ಧಾರ್ಮಿಕ ಕಾರ್ಯಕ್ರಮಗಳು ಹಿಂದೂ ಸಮಾಜವನ್ನು ಒಗ್ಗೂಡಿಸುವ ಕೆಲಸ ಮಾಡುತ್ತಿದೆ ಎಂದರು.



































 
 

ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ ಅಧ್ಯಕ್ಷ ಗೋಪಾಲಕೃಷ್ಣ ಬೋರ್ಕರ್ ಅಧ್ಯಕ್ಷತೆ ವಹಿಸಿದ್ದರು.  ಸಭಾ ಕಾರ್ಯಕ್ರಮದ ಮೊದಲು ಸುಳ್ಯ ಪೇಟೆಯಲ್ಲಿ ತೆರೆದ ವಾಹನದಲ್ಲಿ ರೋಡ್ ಶೋ ನಡೆಯಿತು.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top