ಸುಳ್ಯ: ಸುಳ್ಯ ವಿಧಾನ ಸಭಾಕ್ಷೇತ್ರದ ನೂತನ ಶಾಸಕಿ ಭಾಗೀರಥಿ ಮುರುಳ್ಯರು ಯಕ್ಷಗಾನ ಕಲಾವಿದ ಜಯಾನಂದ ಸಂಪಾಜೆ ಅವರ ಮನೆಗೆ ಭೇಟಿ ನೀಡಿದರು.
ಈ ಸಂದರ್ಭದಲ್ಲಿ ಶಾಸಕರನ್ನು ಮನೆಯವರು ಗೌರವಿಸಿದರು.
ಈ ಸಂದರ್ಭದಲ್ಲಿ ಸುಳ್ಯ ಮಂಡಲ ಪ್ರಮುಖರಾದ ಹರೀಶ್ ಕಂಜಿಪಿಲಿ, ರಾಕೇಶ್ ರೈ ಕೆಡೆಂಜಿ, ಸಂತೋಷ್ ಕುತ್ತಮೊಟ್ಟೆ ಮತ್ತು ಮಹಿಳಾ ಪ್ರಮುಖರು, ಮನೆಯವರು ಉಪಸ್ಥಿತರಿದ್ದರು.
























