ಮೂಡಬಿದಿರೆ: ಮಂಗಳೂರು -ಕಾರ್ಕಳ ರಾಷ್ಟ್ರೀಯ ಹೆದ್ದಾರಿಯ ಮೂಡುಬಿದಿರೆ ಸಮೀಪದ ತೋಡಾರಿನ ಹಂಡೇಲು ಎಂಬಲ್ಲಿ ಬೈಕ್ ಗೆ ಖಾಸಗಿ ಬಸ್ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಬಗ್ಗೆ ವರದಿಯಾಗಿದೆ.
ಮೃತ ವಿದ್ಯಾರ್ಥಿಯನ್ನು ಎಡಪದವು ರಾಜೇಶ್ವರಿ ಜ್ಯುವೆಲರ್ಸ್ ಚಂದ್ರಹಾಸ ಆಚಾರ್ಯ ಅವರ ಪುತ್ರ ,ಆಳ್ವಾಸ್ ಕಾಲೇಜಿನ ಪ್ರಥಮ ಬಿಸಿಎ ವಿದ್ಯಾರ್ಥಿ ಕಾರ್ತಿಕ್ ಆಚಾರ್ಯ (19) ಗುರುತಿಸಲಾಗಿದೆ.
























