ಕಾಣಿಯೂರು: ಕಾಣಿಯೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಏಳು ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದ ದೈಹಿಕ ಶಿಕ್ಷಣ ಶಿಕ್ಷಕಿ ರೇವತಿ ಪಿ. ಅವರು ಮೇ 31ರಂದು ಕರ್ತವ್ಯದಿಂದ ನಿವೃತ್ತರಾದ ಹಿನ್ನಲೆಯಲ್ಲಿ ಅವರನ್ನು ಕಾಣಿಯೂರು ಸ. ಹಿ. ಪ್ರಾ. ಶಾಲೆಯಲ್ಲಿ ಕಡಬ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಮತ್ತು ಕಡಬ ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಗ್ರೇಡ್-2 ವತಿಯಿಂದ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ರೇವತಿ ಪಿ ಅವರನ್ನು ಶಾಲು ಹೊದಿಸಿ, ಫಲಪುಷ್ಪ ನೀಡಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಕಡಬ ತಾಲೂಕು ಸರಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸ (ರಿ)ಬೆಂಗಳೂರು ಇದರ ಪ್ರಧಾನ ಕಾರ್ಯದರ್ಶಿ ಬಾಲಕೃಷ್ಣ ಕೆ.ಮತ್ತು ಗ್ರೇಡ್-೨ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ರಾಮಣ್ಣ ಬಿ, ಕಾಣಿಯೂರು ಶಾಲಾ ಮುಖ್ಯ ಶಿಕ್ಷಕ ಪುಂಡಲಿಕ ಪೂಜಾರ ಹಾಗೂ ಅಧ್ಯಾಪಕ ವೃಂದ ಹಾಗೂ ನಿವೃತ್ತ ಶಿಕ್ಷಕಿಯ ಕುಟುಂಬದ ಸದಸ್ಯರು ಉಪಸ್ಥಿತರಿದ್ದರು.