ಸವಣೂರು : ಸವಣೂರು ಗ್ರಾಮದ ಮೊಗರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಂಗಮಂದಿರ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಲಾಯಿತು.
ಸವಣೂರು ಗ್ರಾಮ ಪಂಚಾಯತ್ ಸದಸ್ಯರಾದ ಬಾಬು ಅವರು ತೆಂಗಿನಕಾಯಿ ಒಡೆಯುವುದರ ಕಾಮಗಾರಿಗೆ ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ,ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮನ್ಮಥ ,ಗ್ರಾಮ ಪಂಚಾಯತ್ ಸದಸ್ಯರಾದ ರಜಾಕ್ ಕೆನರಾ, ಚೆನ್ನು,ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ರಫೀಕ್ ಎಂ. ಎ. ಉಪಾಧ್ಯಕ್ಷೆ ದಿವ್ಯಲತಾ, ಪ್ರಭಾರ ಮುಖ್ಯಗುರು ಮಮತಾ ಎನ್.ಶಾಲಾಭಿವೃದ್ದಿ ಸಮಿತಿ ಸದಸ್ಯರುಗಳು,ಸಿವಿಲ್ ಇಂಜಿನಿಯರ್ ರಾಜೇಶ್ ,ಗುತ್ತಿಗೆದಾರ ಗಂಗಾಧರ,ಶಾಲಾ ಶಿಕ್ಷಕ ವೃಂದ, ವಿದ್ಯಾರ್ಥಿ ವೃಂದ, ಹಾಗೂ ಪೋಷಕರು ಉಪಸ್ಥಿತರಿದ್ದರು.
























