ಬದಲಾಗಲಿದ್ದಾರೆಯೇ ಬಿಜೆಪಿ ರಾಜ್ಯಾಧ್ಯಕ್ಷ ? ಇಂದು ಬೆಂಗಳೂರಿನಲ್ಲಿ ಬಿಜೆಪಿ ಅವಲೋಕನ ಸಭೆ?

ಬೆಂಗಳೂರು: ಚುನಾವಣೆಯ ಬಳಿಕ ಮೊದಲ ಬಾರಿಗೆ ಬಿಜೆಪಿ ಗುರುವಾರ ಸಂಜೆ ನೂತನ ಶಾಸಕರು ಮತ್ತು ಪರಾಜಿತ ಅಭ್ಯರ್ಥಿಗಳ ಅವಲೋಕನ ಸಭೆಯನ್ನು ಮಲ್ಲೇಶ್ವರಂನ ಬಿಜೆಪಿ ಕಚೇರಿಯಲ್ಲಿ ಕರೆದಿದೆ.
ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ನೇತೃತ್ವದಲ್ಲಿ ಕೋರ್ ಕಮಿಟಿ ಸಭೆ ನಡೆಯಲಿದ್ದು, ಬಿಜೆಪಿ ಶಾಸಕಾಂಗ ಪಕ್ಷದ ನಾಯಕ, ವಿರೋಧ ಪಕ್ಷದ ನಾಯಕ ಹಾಗೂ ಹೊಸ ರಾಜ್ಯಾಧ್ಯಕ್ಷ ಆಯ್ಕೆ ಬಗ್ಗೆ ಚರ್ಚೆ ನಡೆಯಲಿದೆ ಎಂದು ತಿಳಿದುಬಂದಿದೆ.


ಈ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ 9 ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ ಮುಂದೆ ಹಮ್ಮಿಕೊಳ್ಳಬೇಕಾಗಿರುವ ಕಾರ್ಯಕ್ರಮಗಳು, ಕೇಂದ್ರದ ಯೋಜನೆಗಳನ್ನು ಜನರಿಗೆ ತಲುಪಿಸುವ ಬಗೆ, ಜುಲೈ 3ರಿಂದ ಆರಂಭವಾಗಲಿರುವ ರಾಜ್ಯ ವಿಧಾನ ಮಂಡಲದ ಅಧಿವೇಶನ ಮತ್ತಿತರ ಪ್ರಸಕ್ತ ವಿದ್ಯಮಾನಗಳ ಬಗ್ಗೆಯೂ ಚರ್ಚೆ ನಡೆಯಲಿದೆ. ಇದರ ಜತೆಗೆ ಮುಖ್ಯವಾಗಿ ಶಾಸಕಾಂಗ ಪಕ್ಷದ ನಾಯಕ ಮತ್ತು ಪಕ್ಷದ ನೂತನ ಅಧ್ಯಕ್ಷರ ಆಯ್ಕೆ ಸಂಬಂಧ ಶಾಸಕರು ಹಾಗೂ ಪರಾಜಿತ ಅಭ್ಯರ್ಥಿಗಳ ಅಭಿಪ್ರಾಯವನ್ನೂ ಆಲಿಸಲಾಗುತ್ತದೆ. ಇಲ್ಲಿ ವ್ಯಕ್ತವಾಗುವ ಅಭಿಪ್ರಾಯಗಳನ್ನು ಆಧರಿಸಿ ಪಕ್ಷದ ವರಿಷ್ಠರು ಮುಂದಿನ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ.
ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ವಿಜಯಪುರ ಶಾಸಕ ಬಸನಗೌಡ ಪಾಟೀಲ ಪ್ರತಿಪಕ್ಷ ನಾಯಕ ಸ್ಥಾನದ ಆಕಾಂಕ್ಷಿಗಳಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಶಾಸಕಾಂಗ ಪಕ್ಷದ ನಾಯಕ ಮತ್ತು ಪಕ್ಷದ ನೂತನ ಅಧ್ಯಕ್ಷರ ಆಯ್ಕೆ ಸಂಬಂಧ ಶಾಸಕರು ಹಾಗೂ ಪರಾಜಿತ ಅಭ್ಯರ್ಥಿಗಳ ಅಭಿಪ್ರಾಯವನ್ನೂ ಆಲಿಸಲಾಗುತ್ತದೆ. ಇಲ್ಲಿ ವ್ಯಕ್ತವಾಗುವ ಅಭಿಪ್ರಾಯಗಳನ್ನು ಆಧರಿಸಿ ಪಕ್ಷದ ವರಿಷ್ಠರು ಮುಂದಿನ ನಿರ್ಧಾರ ಕೈಗೊಳ್ಳಲಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಜುಲೈ 7ರಂದು ಬಜೆಟ್ ಮಂಡಿಸಲಿದ್ದು ಅದಕ್ಕೂ ಮುನ್ನ ಬಿಜೆಪಿ ವಿಪಕ್ಷ ನಾಯಕನ ಆಯ್ಕೆ ಮಾಡಬೇಕಾಗಿದೆ.


ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಅವಧಿ ಕಳೆದ ವರ್ಷ ಆಗಸ್ಟ್ನಲ್ಲಿ ಕೊನೆಗೊಂಡಿತ್ತು. ಮೇ 10ರಂದು ನಡೆದ ವಿಧಾನಸಭಾ ಚುನಾವಣೆಯ ಕಾರಣದಿಂದ ಅವಧಿಯನ್ನು ವಿಸ್ತರಿಸಲಾಗಿತ್ತು. ಇದೀಗ ರಾಜ್ಯಾಧ್ಯಕ್ಷರ ಬದಲಾವಣೆ ಬಗ್ಗೆಯೂ ಬಿಜೆಪಿ ವಲಯದಲ್ಲಿ ಚರ್ಚೆಗಳು ನಡೆಯುತ್ತಿದ್ದು, ಯಾರಾಗಲಿದ್ದಾರೆ ಎನ್ನುವುದು ತೀವ್ರ ಕುತೂಹಲ ಮೂಡಿಸಿದೆ.
ಒಟ್ಟು ಮೂರು ಸಭೆ ನಡೆಯಲಿದ್ದು, ಮೊದಲಿಗೆ ಬೆಳಗ್ಗೆ 10.30ಕ್ಕೆ ನೂತನ ಶಾಸಕರ ಸಭೆ ನಡೆಯಲಿದೆ. ಬಳಿಕ ಮಧ್ಯಾಹ್ನ ಪರಾಜಿತ ಅಭ್ಯರ್ಥಿಗಳ ಸಭೆ ನಡೆಯಲಿದೆ. ಈ ಸಭೆಯಲ್ಲಿ ಪಕ್ಷದ ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ರಾಜ್ಯಾಧ್ಯಕ್ಷ ನಳಿನ್ಕುಮಾರ್ ಕಟೀಲ್, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಮೊದಲಾದವರು ಪಾಲ್ಗೊಳ್ಳಲಿದ್ದಾರೆ.









































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top