ಜೂ.13 : ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಕ್ಷಯಮುಕ್ತ ಭಾರತ ಮಾಹಿತಿ ಶಿಬಿರ

ಪುತ್ತೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಪುತ್ತೂರು ತಾಲೂಕು ಘಟಕದ ವತಿಯಿಂದ ಕ್ಷಯಮುಕ್ತ ಭಾರತ-ಮಾಹಿತಿ ಶಿಬಿರ ಜೂ.13 ಮಂಗಳವಾರ ಪುತ್ತೂರು ಪತ್ರಿಕಾಭವನದಲ್ಲಿ ನಡೆಯಲಿದೆ.

ಬೆಳಿಗ್ಗೆ 11 ಗಂಟೆಗೆ ನಡೆಯುವ ಕಾರ್ಯಕ್ರಮದ ಉದ್ಘಾಟನೆಯನ್ನು  ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ನೆರವೇರಿಸಲಿದ್ದು, ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಸಿದ್ದಿಕ್ ನಿರಾಜೆ ಅಧ್ಯಕ್ಷತೆ ವಹಿಸುವರು. ಸಂಪನ್ಮೂಲ ವ್ಯಕ್ತಿಗಳಾಗಿ ದ.ಕ.ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ.ಬದ್ರುದ್ದೀನ್, ಮಂಗಳೂರು ಕ್ಷಯರೋಗ ನಿಯಂತ್ರಣಾಧಿಕಾರಿ ಕಚೇರಿ ಸಂಯೋಜಕ ಮನೋಜ್ ಮಾಹಿತಿ ನೀಡಲಿದ್ದಾರೆ.

ಮುಖ್ಯ ಅತಿಥಿಗಳಾಗಿ  ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ದ.ಕ.ಜಿಲ್ಲಾ ವಾರ್ತಾಧಿಕಾರಿ ರವಿರಾಜ್ ಪಾಲ್ಗೊಳ್ಳಲಿದ್ದಾರೆ ಎಂದು ಸಂಘದ ಪ್ರಕಟಣೆ ತಿಳಿಸಿದೆ.









































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top