ಪುತ್ತೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಬಿ, ಸಿ, ಟ್ರಸ್ಟ್( ರಿ ) ಪುತ್ತೂರು ಪ್ರಗತಿ ಬಂದು ಸ್ವ ಸಹಾಯ ಸಂಘಗಳ ಒಕ್ಕೂಟ ಕುಂಜೂರು ಪಂಜ ಒಕ್ಕೂಟ ಸಭೆ ಮತ್ತು ಪರಿಸರ ಮಾಹಿತಿ ಕಾರ್ಯಕ್ರಮ ದೇವಸ್ಯ ಶ್ರೀ ಮಂಜುನಾಥ ಸಭಾಭವನದಲ್ಲಿ ಭಾನುವಾರ ನಡೆಯಿತು.
ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸರಸ್ವತಿ, ಜನಜಾಗೃತಿ ಅಧ್ಯಕ್ಷ ಮಹಾಬಲ ರೈ ದೀಪ ಬೆಳಗಿಸಿ ಉದ್ಘಾಟನೆ ಮಾಡಿದರು. ಒಕ್ಕೂಟದ ಅಧ್ಯಕ್ಷ ಮಹಾಲಿಂಗ ನಾಯ್ಕ ಅದ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಪುತ್ತೂರು ತಾಲೂಕು ಕೃಷಿ ಅಧಿಕಾರಿ ಉಮೇಶ್ ಬಲ್ನಾಡು, ವಲಯ ಮೇಲ್ವಿಚಾರಕ ಪ್ರಶಾಂತ್ ಕುಮಾರ್, ಸೇವಾ ಪ್ರತಿನಿಧಿ ಆಶಾಲತಾ, ಒಕ್ಕೂಟದ ಪದಾಧಿಕಾರಿಗಳು ಉಪಸ್ಥಿತರಿದ್ದರು, ಸಭಾ ವರದಿಯನ್ನು ಸತೀಶ್ ನಾಯ್ಕ್ ವರದಿ ವಾಚಿಸಿದರು. ಒಕ್ಕೂಟದ ವರದಿಯನ್ನು ಕಾರ್ಯದರ್ಶಿ ಶರ್ಮಿಳಾ ವಾಚಿಸಿದರು.
ಸಾಮೂಹಿಕ ದ್ಯೇಯ ಗೀತೆಯೊಂದಿಗೆ ನಡೆದ ಕಾರ್ಯಕ್ರಮದಲ್ಲಿ ಜಿನ್ನಪ್ಪ ಸ್ವಾಗತಿಸಿದರು, ಜಗದೀಶ್ ವಂದಿಸಿದರು. ಆಶಾಲತಾ ಕಾರ್ಯಕ್ರಮ ನಿರೂಪಿಸಿದರು ಬಳಿಕ ಸಾಂಕೇತಿಕವಾಗಿ ಗಿಡ ನೆಟ್ಟು
ಫಲಾನುಭವಿಗಳಿಗೆ ಗಿಡಗಳನ್ನು ವಿತರಿಸಲಾಯಿತು.