ಸೈಂಟ್ ಆನ್ಸ್ ಇಂಗ್ಲಿಷ್ ಮೀಡಿಯಂ ಸ್ಕೂಲ್ ನಲ್ಲಿ IRCMD ಶಿಕ್ಷಣ ಸಂಸ್ಥೆ ವತಿಯಿಂದ ‘ಅಬಾಕಸ್’ ಗಣಿತ ತರಗತಿ ಉದ್ಘಾಟನೆ.

ಕಡಬ : ಕಡಬದ ಸೈಂಟ್ ಆನ್ಸ್ ಇಂಗ್ಲಿಷ್ ಮೀಡಿಯಂ ಸ್ಕೂಲ್ ನಲ್ಲಿ ಅಬಾಕಸ್ ಗಣಿತ ತರಬೇತಿಯ ಉದ್ಘಾಟನಾ ಕಾರ್ಯಕ್ರಮ ಶಾಲಾ ಸಭಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸೈಂಟ್ ಆನ್ಸ್ ಇಂಗ್ಲಿಷ್ ಮೀಡಿಯಂ ಸ್ಕೂಲ್ ನ ಪ್ರಾಂಶುಪಾಲರಾದ ವಂದನೀಯ ಫಾದರ್ ಅಮಿತ್ ಪ್ರಕಾಶ್ ರೋಡ್ರಿಗಸ್ ರವರು ವಹಿಸಿ ಮಾತನಾಡಿ, ಅಬಾಕಸ್ ತರಗತಿಯನ್ನು ನಮ್ಮ ವಿದ್ಯಾರ್ಥಿಗಳಿಗೆ ನೀಡುವುದರಿಂದ ವಿದ್ಯಾರ್ಥಿಗಳ ಬುದ್ದಿ ಶಕ್ತಿ ಉತ್ತಮಗೊಳ್ಳುತ್ತದೆ, ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಇನ್ನಿತರ ಚಟುವಟಿಕೆಗಳಲ್ಲಿಯೂ ಪ್ರಗತಿ ಸಾಧಿಸುತ್ತಾರೆ ಎಂದು ಹೇಳಿದರು.

ಮುಖ್ಯ ಅತಿಥಿಯಾಗಿ ಪುತ್ತೂರು ಹಾಗೂ ಸುಳ್ಯ IRCMD  ಎಜುಕೇಶನ್ ಸೆಂಟರ್ ನ CEO ಪ್ರಫುಲ್ಲ ಗಣೇಶ್  ಅಬಾಕಸ್ ತರಗತಿ ಬಗ್ಗೆ ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ಮಾಹಿತಿ ನೀಡಿದರು. ಸಹ ಶಿಕ್ಷಕಿ ಶಿಲ್ಪ ಸ್ವಾಗತಿಸಿ, ಸಹ ಶಿಕ್ಷಕಿ ಶೈನಸ್ ವಂದಿಸಿದರು. ಸಹ ಶಿಕ್ಷಕಿ ದಿವ್ಯ ಜ್ಯೋತಿ ಕಾರ್ಯಕ್ರಮ ನಿರೂಪಿಸಿದರು.



































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top