ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಬಿತ್ತರಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಸರಕಾರ ಪೊಲೀಸ್ ಇಲಾಖೆ ಆದೇಶ ನೀಡಿದೆ.
ಈಗಾಗಲೇ ಜಗತ್ತಿನಾದ್ಯಂತ ಹಲವಾರು ಸಾಮಾಜಿಕ ಜಾಲತಾಣಗಳಿದ್ದು, ಅವುಗಳ ಪೈಕಿ ವಾಟ್ಸಪ್, ಫೇಸ್ ಬುಕ್, ಇನ್ ಸ್ಟಾ ಗ್ರಾಂ, ಯೂಟ್ಯೂಬ್ ಮುಂತಾದ ಸಾಮಾಜಿಕ ಜಾಲತಾಣಗಳಲ್ಲಿ ಅಕೌಂಟ್ ತೆರೆದು ತಮಗೆ ಬೇಕಾದಂತೆ ಸುಳ್ಳು ಸುದ್ದಿಗಳನ್ನು ಹರಿಯಬಿಟ್ಟು ಸಮಾಜದಲ್ಲಿ ಗೊಂದಲ, ದ್ವೇಷ ಉಂಟ ಮಾಡುವುದು ಒಂದೆಡೆಯಾದರೆ, ಇನ್ನೊಂದೆಡೆ ಸಾರ್ವಜನಿಕರಿಗೆ ಉಪಯೋಗವಾಗುವಂತ ಒಳ್ಳೆಯ ಸುದ್ಧಿಗಳನ್ನು ಬಿತ್ತರಿಸುವವರಿದ್ದಾರೆ.
ಇನ್ನು ಮುಂದೆ ಪೊಲೀಸ್ ಇಲಾಖೆ ಸಾಮಾಜಿಕ ಜಾಲತಾಣಗಳ ಮೇಲೆ ಹದ್ದಿನ ಕಣ್ಣಿಡುವುದು ಖಚಿತವಾಗಿದೆ. ಈ ಕುರಿತು ಮುಖ್ಯಮಂತ್ರಿ ಸಿದ್ಧರಾಮಯ್ಯ ಸುಳ್ಳು ಸುದ್ಧಿ ಬಿತ್ತರಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಪೊಲೀಸ್ ಇಲಾಖೆಗೆ ಸೂಚನೆ ನೀಡಿದ್ದಾರೆ.
2013 ರಲ್ಲಿ ಕಾಂಗ್ರೆಸ್ ಆಡಳಿತಕ್ಕೆ ಬಂದಾಗಲೂ ಸುಳ್ಳು ಸುದ್ಧಿಗಳ ಹಾವಳಿ ಹೆಚ್ಚಾಗಿತ್ತು. ಪ್ರಸ್ತುತ ಈ ತಂತ್ರವನ್ನು ರಾಜಕೀಯ ವಿರೋಧಿಗಳು ಆರಂಭಿಸಿದ್ದಾರೆ. ಇನ್ನು ಲೋಕಸಭೆ ಚುನಾವಣೆ ಹತ್ತಿರ ಬರುತ್ತಿರುವುದರಿಂದ ಸುಳ್ಳು ಸುದ್ಧಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟು ಸಮಾಜದಲ್ಲಿ ಅಶಾಂತಿ ಸೃಷ್ಟಿಸುವ ಸಾಧ್ಯತೆ ಹೆಚ್ಚಾಗಿದೆ ಎಂಬುದನ್ನು ಸರಕಾರ ಮನಗಂಡಿದೆ.
ಈ ನಿಟ್ಟಿನಲ್ಲಿ ಸೈಬರ್ ಪೊಲೀಸರನ್ನು ಸುಳ್ಳು ಸುದ್ದಿ ಪತ್ತೆಗೆ ಸಜ್ಜುಗೊಳಿಸಬೇಕು. ಈ ಕುರಿತು ಪ್ರತೀ ತಿಂಗಳು ವರದಿ ನೀಡುವಂತೆ ಮುಖ್ಯಮಂತ್ರಿ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.