ಹೆರಿಗೆ ವೇಳೆ ತೀವ್ರ ರಕ್ತಸ್ರಾವದಿಂದ ಮಹಿಳೆ ಮೃತ್ಯು

ಉಪ್ಪಿನಂಗಡಿ : ಹೆರಿಗೆ ವೇಳೆ ತೀವ್ರ ರಕ್ತಸ್ರಾವದಿಂದ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಬುಧವಾರ ನಡೆದಿದೆ.

ಪುತ್ತೂರು ತಾಲೂಕಿನ ಹಿರೇಬಂಡಾಡಿ ಗ್ರಾಮದ ಮುರ ಕಾಲೋನಿ ನಿವಾಸಿ, ಬಾಲಕೃಷ್ಣ ಗೌಡ ಎಂಬವರ ಪತ್ನಿ, ಹಿರೇಬಂಡಾಡಿ ಗ್ರಾಮದ ಆಶಾ ಕಾರ್ಯಕರ್ತೆ ಭವ್ಯ (28) ಮೃತಪಟ್ಟ ಮಹಿಳೆ. ಹಸುಗೂಸು ಗಂಡು ಮಗು ಆರೋಗ್ಯವಾಗಿರುವುದಾಗಿ ತಿಳಿದು ಬಂದಿದೆ.

ಭವ್ಯ ಅವರಿಗೆ 3ನೇ ಹೆರಿಗೆಯಾಗಿದ್ದು, ಹೆರಿಗೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸೋಮವಾರ ಪುತ್ತೂರು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಮಂಗಳವಾರ ರಾತ್ರಿ ಅವರು ಗಂಡು ಮಗುವಿಗೆ ಜನ್ಮ ನೀಡಿದ್ದರು. ಹೆರಿಗೆಯಾಗುತ್ತಲೇ ತೀವ್ರ ರೀತಿಯಲ್ಲಿ ರಕ್ತಸ್ರಾವ ಉಂಟಾಗಿದ್ದು, ಇದನ್ನು ತಡೆಗಟ್ಟುವ ಚಿಕಿತ್ಸೆಯಿಂದ ಪ್ರಯೋಜನವಾಗದ ಕಾರಣ ಅವರನ್ನು ಮಂಗಳೂರಿನ ವೆನ್‌ಲಾಕ್ ಆಸ್ಪತ್ರೆಗೆ ಕರೆದೊಯ್ಯಲಾಗಿ ಚಿಕಿತ್ಸೆ ನೀಡಲಾಗಿತ್ತು, ಆದರೆ ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.





































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top