ನಾಳೆ (ಜೂ.26) : ಸಂಘ ಪರಿವಾರ ಸಂಘಟನೆಗಳ ಬೈಠಕ್ | ಹಿಂದೂ ಸಂಘಟಕ ಅರುಣ್‌ಕುಮಾರ್‌ಪುತ್ತಿಲ ಅವರ ವಿಚಾರ ಚರ್ಚೆಗೆ ಬರುವ ಸಾಧ್ಯತೆ

ದ.ಕ.ಜಿಲ್ಲಾ ವ್ಯಾಪ್ತಿಯ ಸಂಘ ಪರಿವಾರ ಸಂಘಟನೆಗಳ ಸಮನ್ವಯ ಬೈಠಕ್‌ಜೂ.26ರಂದು ಮಂಗಳೂರಿನಲ್ಲಿ ನಡೆಯಲಿದೆ.

ಸುಮಾರು ಒಂದು ವರ್ಷದ ಬಳಿಕ ಸಭೆ ಮಂಗಳೂರಿನ ಸಂಘನಿಕೇತನದಲ್ಲಿ ನಡೆಯುವ ಈ ಬೈಠಕ್‌ನಲ್ಲಿ ಆರ್‌ಎಸ್‌ಎಸ್‌ನ ಪ್ರಾಂತ ಮಟ್ಟದ ಪ್ರಮುಖರು ಭಾಗವಹಿಸಲಿದ್ದಾರೆ. ಇದರಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್‌ಕಟೀಲ್‌ಸಹಿತ ಬಿಜೆಪಿ ಹಾಗೂ ಸಂಘಪರಿವಾರದ 25ಕ್ಕೂ ಅಧಿಕ ಸಂಘಟನೆಗಳ 100ಕ್ಕೂ ಅಧಿಕ ಮಂದಿ ಪಾಲ್ಗೊಳ್ಳಲಿದ್ದಾರೆ.ಬಿಜೆಪಿಯಿಂದ ಜಿಲ್ಲಾಧ್ಯಕ್ಷ, ಪ್ರಧಾನ ಕಾರ್ಯದರ್ಶಿ, ಸಹಪ್ರಭಾರಿ, ಸಂಘಟನಾ ಕಾರ್ಯದರ್ಶಿಗಳು ಸೇರಿದಂತೆ ಇತರೆ ಪರಿವಾರ ಸಂಘಟನೆಗಳ ಅಧ್ಯಕ್ಷ, ಪ್ರಧಾನ ಕಾರ್ಯದರ್ಶಿ ಸ್ತರದ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ.

ದ.ಕ ಜಿಲ್ಲೆಯವರೇ ಆದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್‌ಕಟೀಲ್‌ಆಹ್ವಾನಿತರಾಗಿದ್ದಾರೆ ಎನ್ನಲಾಗಿದೆ.ಪ್ರತಿ ಮೂರು ತಿಂಗಳಿಗೊಮ್ಮೆ ಸಮನ್ವಯ ಬೈಠಕ್‌ನಡೆಯುವುದು ವಾಡಿಕೆಯಾಗಿದ್ದು, ಕಳೆದ ಒಂದು ವರ್ಷದಿಂದ ನಾನಾ ಕಾರಣಗಳಿಗೆ ಸಮನ್ವಯ ಬೈಠಕ್‌ನಡೆದಿಲ್ಲ. ಈ ಬಾರಿಯ ಬೈಠಕ್‌ಜಿಲ್ಲೆಯಲ್ಲಿ ಪ್ರಸಕ್ತ ನಡೆಯುತ್ತಿರುವ ರಾಜಕೀಯ ಹಾಗೂ ಸಂಘಪರಿವಾರದ ಸಂಘಟನೆಗಳ ಚಟುವಟಿಕೆ ಹಿನ್ನೆಲೆಯಲ್ಲಿ ಭಾರಿ ಮಹತ್ವ ಪಡೆದುಕೊಂಡಿದೆ.





































 
 

ಮುಖ್ಯವಾಗಿ ಪುತ್ತೂರು ಸೇರಿದಂತೆ ಜಿಲ್ಲೆಯಲ್ಲಿ ಬಿಜೆಪಿ ಪಕ್ಷದಲ್ಲಿ ಚುನಾವಣಾ ಪೂರ್ವ ಹಾಗೂ ನಂತರ ನಡೆದ ವಿದ್ಯಮಾನಗಳು, ಅಸಮಾಧಾನ ಇತ್ಯಾದಿ ಅಂಶಗಳು, ಹೊಸ ಸರ್ಕಾರ ಅಸ್ತಿತ್ವಕ್ಕೆ ಬಂದ ಮೇಲೆ ಹಿಂದೂ ಸಂಘಟನೆಗೆ ಎದುರಾದ ಸವಾಲು, ಅವುಗಳನ್ನು ಎದುರಿಸುವ ಬಗೆ ಇತ್ಯಾದಿ ಸಂಗತಿಗಳ ಬಗ್ಗೆ ವಿಸ್ತೃತ ಚರ್ಚೆ ನಡೆಯಲಿದ್ದು, ಗೊಂದಲ, ಸಮಸ್ಯೆಗಳ ಇತ್ಯರ್ಥಕ್ಕೆ ಬೈಠಕ್‌ಸಹಕಾರಿಯಾಗಲಿದೆ. ಮುಂದಿನ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷ ಕೈಗೊಳ್ಳಬೇಕಾದ ತೀರ್ಮಾನ, ಸಂಘಪರಿವಾರದ ಚಟುವಟಿಕೆಗಳು ಬೈಠಕ್‌ನಲ್ಲಿ ಚರ್ಚೆಗೆ ಒಳಪಡಲಿದೆ ಎಂದು ಹೇಳಲಾಗಿದೆ.

ಮುಖ್ಯವಾಗಿ ಪುತ್ತೂರಿನಲ್ಲಿ ಇತ್ತೀಚಿನ ಅಸೆಂಬ್ಲಿ ಚುನಾವಣೆಯಲ್ಲಿ ಸ್ವತಂತ್ರ ವಾಗಿ ಸ್ಪರ್ದಿಸಿ ಬಿಜೆಪಿಯ ಸೋಲಿಗೆ ಕಾರಣವಾದ ಹಿಂದೂ ಸಂಘಟಕ ಅರುಣ್‌ಕುಮಾರ್‌ಪುತ್ತಿಲ ಅವರ ವಿಚಾರ ಚರ್ಚೆಗೆ ಬರುವ ಸಾಧ್ಯತೆ ಇದೆ. ಈಗಾಗಲೇ ಪುತ್ತಿಲ ಅವರನ್ನು ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಅವರ ಬೆಂಬಲಿಗರು ಜಾಲತಾಣಗಳಲ್ಲಿ ಹಾಗೂ ಜಿಲ್ಲೆಯ ಪ್ರತಿ ತಾಲೂಕುಗಳಲ್ಲಿ ಅಭಿಯಾನವನ್ನೇ ಆರಂಭಿಸಿದ್ದಾರೆ. ಇದು ಬಿಜೆಪಿ ಹಾಗೂ ಸಂಘಪರಿವಾರಕ್ಕೆ ತಲೆನೋವಿಗೆ ಕಾರಣವಾಗಿದೆ. ಇದಕ್ಕೆ ಬೈಠಕ್‌ನಲ್ಲಿ ತಾರ್ಕಿತ ಅಂತ್ಯ ಹಾಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top