ವಿಮಾನದ ಸೀಟಿನ ಮೇಲೆ ಮಲಮೂತ್ರ ಮಾಡಿದ ಪ್ರಯಾಣಿಕ | ಆರೋಪಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ ಪೊಲೀಸರು

ಹೊಸದಿಲ್ಲಿ: ಪ್ರಯಾಣಿಕನೋರ್ವ ವಿಮಾನದ ಸೀಟಿನ ಮೇಲೆ ಮಲಮೂತ್ರ ವಿಸರ್ಜಿಸಿದ ಅಸಹ್ಯಕರ ಘಟನೆ ಇಂಡಿಯಾ ಏರ್‍ ಲೈನ್ ವಿಮಾನದಲ್ಲಿ ನಡೆದಿದೆ.

ಮುಂಬೈ-ದೆಹಲಿ ಏರ್ ಇಂಡಿಯಾ ವಿಮಾನದಲ್ಲಿ ಮಲಮೂತ್ರ ವಿಸರ್ಜಿಸಿದ ಪ್ರಯಾಣಿಕನನ್ನು ಪೊಲೀಸರು ಬಂಧಿಸಿದ್ದಾರೆ. ಮುಂಬೈಯಿಂದ ದಿಲ್ಲಿಗೆ ತೆರಳುತ್ತಿದ್ದ ಏರ್ ಇಂಡಿಯಾದ ವಿಮಾನದ ಎಐಸಿ 866 ಫ್ಲೈಟ್ ನ ಸೀಟ್ ನಂ.17ಎಫ್ ನಲ್ಲಿ ಕುಳಿತಿದ್ದ ಪ್ರಯಾಣಿಕ ರಾಮ್ ಸಿಂಗ್ ಎಂಬಾತ ವಿಮಾನದೊಳಗೆ ಮಲಮೂತ್ರ ವಿಸರ್ಜನೆ ಮಾಡಿದ್ದಾನೆ. ಈ ದುರ್ವರ್ತನೆಯನ್ನು ವಿಮಾನದ ಕ್ಯಾಬಿನ್ ಸಿಬ್ಬಂದಿ ಗಮಸನಿಸಿ ಆತನಿಗೆ ಮೌಖಿಕ ಎಚ್ಚರಿಕೆ ನೀಡಿದ ಬಳಿಕ ಇತರ ಪ್ರಯಾಣಿಕರಿಂದ ಆತನನ್ನು ಪ್ರತ್ಯೇಕಿಸಲಾಯಿತು. ವಿಮಾನ ದಿಲ್ಲಿ ವಿಮಾನ ನಿಲ್ದಾಣದಲ್ಲಿ ಇಳಿಯುತ್ತಿದ್ದಂತೆ ಸ್ಥಳೀಯ ಪೊಲೀಸ್ ಠಾಣೆಗೆ ದೂರು ಸಲ್ಲಿಸಲಾಯಿತು.

ವಿಮಾನ ಕ್ಯಾಪ್ಟನ್ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ವಿಮಾನ ನಿಲ್ದಾಣ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 294 ಮತ್ತು 510ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಆರೋಪಿ ಪ್ರಯಾಣಿಕನನ್ನು ಬಂಧಿಸಿ ಸ್ಥಳೀಯ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ. ಬಳಿಕ ಕೋರ್ಟ್ ಆತನಿಗೆ ಜಾಮೀನು ನೀಡಿದೆ.







































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top