ಪುತ್ತೂರು: ರಾಜ್ಯ ಸರಕಾರದ ಐದು ಗ್ಯಾರಂಟಿಗಳಲ್ಲಿ ಒಂದಾಗಿರುವ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಶಕ್ತಿ ಯೋಜನೆಗೆ ಸ್ಮಾರ್ಟ್ ಕಾರ್ಡ್ ಕಡ್ಡಾವಾಗಿದ್ದು, ಕಾರ್ಡ್ ವಿತರಣೆಗೆ ಹೊಸ ಪೋರ್ಟಲ್ ಕಾರ್ಯಾರಂಭ ಮಾಡಲಿದೆ ಎಂದು ರಾಜ್ಯ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ.
ಸರಕಾರಿ ಬಸ್ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅರ್ಜಿ ಸಲ್ಲಿಸಲೆಂದೇ ಹೊಸದಾದ ಪೋರ್ಟಲ್ ಶೀಘ್ರದಲ್ಲಿ ಆರಂಭ ಮಾಡಲಿದೆ ಎಂದು ಅವರು ತಿಳಿಸಿದ್ದಾರೆ.
ಸರಕಾರಿ ಬಸ್ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಒದಗಿಸುವ ಶಕ್ತಿ ಯೋಜನೆಯ ಲಾಭ ಪಡೆಯಲು ಸ್ಮಾರ್ಟ್ ಕಾರ್ಡ್ಗಳ ಅಗತ್ಯವಿದೆ. ಸೇವಾ ಸಿಂಧು ಪೋರ್ಟಲ್ನಲ್ಲಿ ಅರ್ಜಿ ಸಲ್ಲಿಸುವ ಮೂಲಕ ಸ್ಮಾರ್ಟ್ ಕಾರ್ಡ್ ಪಡೆಯಬಹುದು ಎಂದು ಅವರು ತಿಳಿಸಿದ್ದಾರೆ.