ಚುನಾವಣೆ ಸಂದರ್ಭ ವಾಮಾಚಾರ ಹೋಮ ಮಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ | ಕ್ರಮ ಕೈಗೊಳ್ಳುವಂತೆ ನಗರ ಪೊಲೀಸರಿಗೆ ದೂರು

ಪುತ್ತೂರು: ಚುನಾವಣೆ ಸಂದರ್ಭ ಅರುಣ್ ಕುಮಾರ್ ಪುತ್ತಿಲರ ಮೇಲೆ ವಾಮಾಚಾರ ಹೋಮ ಮಾಡಿಸಿದ್ದಾರೆ ಎಂದು ಆರೋಪಿಸಿ ಸಾಮಾಜಿಕ ಜಾಲತಾಣಗಳಲ್ಲಿ ನನ್ನ ಮೇಲೆ ಬರುತ್ತಿರುವ ಆರೋಪ ಆಧಾರರಹಿತವಾಗಿದೆ.

ಆರೋಪಿಗಳಿಗೆ ಹಾಗೂ ಕುಮ್ಮಕ್ಕು ನೀಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಬಜರಂಗದಳ ಪ್ರಾಂತ ಸಂಯೋಜಕ ಮುರಳೀಕೃಷ್ಣ ಹಸಂತಡ್ಕ ಪುತ್ತೂರು ಪೊಲೀಸರಿಗೆ ದೂರು ನೀಡಿದ್ದಾರೆ.

ದೂರು ನೀಡುವ ಮೊದಲು ಶುಕ್ರವಾರ ಬೆಳಿಗ್ಗೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿ, ಸಾಮಾಜಿಕ ಜಾಲತಾಣಗಳಲ್ಲಿ ಮಾನಹಾನಿ ಸಂದೇಶ ರವಾನೆ ಮಾಡುತ್ತಿರುವವರಿಗೆ ಸದ್ಭುದ್ಧಿ ಕರುಣಿಸುವಂತೆ ದೇವರಲ್ಲಿ ಪ್ರಾರ್ಥನೆ ಮಾಡಿದರು.



































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top