ಬೆಂಗಳೂರು : ರಾಜ್ಯಾದ್ಯಂತ ಮುಂದಿನ ಐದು ದಿನಗಳ ಕಾಲ ಭಾರೀ ಮಳೆಯಾಗಲಿದ್ದು, ಕರಾವಳಿಯಲ್ಲೂ ಭಾರೀ ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಈ ನಿಟ್ಟಿನಲ್ಲಿ ಜು.1 ರಿಂದ3 ರ ವರೆಗೆ ಎಲ್ಲೋ ಅಲರ್ಟ್ ಹಾಗೂ 4 ಹಾಗೂ 5 ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಕಳೆದ ಹತ್ತು ದಿನಗಳಿಂದಲೂ ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಉತ್ತಮ ಮಳೆ ಸುರಿಯುತ್ತಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು, ಕೊಡಗು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಜುಲೈ 3 ರಂದು ಭಾರಿ ಮಳೆ ಸುರಿಯಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಜಿಲ್ಲೆಗಳ ಪೈಕಿ ಉತ್ತರ ಕನ್ನಡ ಜಿಲ್ಲೆಯಲ್ಲಿಯೇ ಭಾರೀ ಮಳೆ ಸುರಿದಿದೆ. ಅಂಕೋಲಾ, ಗೋಕರ್ಣ, ಕುಮಟಾದಲ್ಲಿ ತಲಾ 9 ಸೆಂ.ಮೀ, ಮಳೆಯಾಗಿದ್ದರೆ, ಹೊನ್ನಾವರದಲ್ಲಿ 8 ಸೆಂ.ಮೀ., ಶಿರಾಲಿ, ಕಾರವಾರದಲ್ಲಿ ತಲಾ 7 ಸೆಂ.ಮೀ., ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ 6 ಸೆಂ.ಮೀ. ಮಳೆಯಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿಯನ್ನು ನೀಡಿದೆ.
ಅಲರ್ಟ್ ಘೋಷಣೆ ಹಿನ್ನಲೆಯಲ್ಲಿ ತಗ್ಗು ಪ್ರದೇಶಗಳಲ್ಲಿ ವಾಸಿಸುವ ಜನರು ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಜಿಲ್ಲಾಡಳಿ ಈಗಾಗಲೇ ಸೂಚಿಸಿದೆ.