ಪುತ್ತೂರು: ಬೆಳ್ಳಾರೆಯ ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಆರೋಪಿಗಳಿಗೆ ಜೂ.30 ರಂದು ಡೆಡ್ ಲೈನ್ ನೀಡಲಾಗಿದ್ದು, ಆರೋಪಿಗಳು ನ್ಯಾಯಾಲಯಕ್ಕೆ ಶರಣಾಗಿಲ್ಲ ಎಂದು ಎನ್‍ಐಎ ಮೂಲಗಳಿಂದ ಮಾಹಿತಿ ಲಭಿಸಿದೆ.
ಪ್ರಮುಕ ಆರೋಪಿಗಳಾದ ುಮರ್ ಫಾರೂಕ್, ಅಬೂಬಕ್ಕರ್ ಸಿದ್ದಿಕ್, ತುಫೈಲ್, ಮೊಹಮ್ಮದ್ ಮುಸ್ತಾಫಾ ಎನ್‍ಐಗೆ ಬೇಕಾಗಿರುವ ಆರೋಪಿಗಳಾಗಿದ್ದಾರೆ. ಈ ನಾಲ್ಕು ಜನರ ಪತ್ತೆಗೆ 14 ಲಕ್ಷ ರೂ. ಬಹುಮಾನ ಪತ್ತೆ ಮಾಡಿದವರಿಗೆ ನೀಡಲಾಗುವುದು ಎಂದು ಘೋಷಣೆ ಮಾಡಲಾಗಿತ್ತು. ಈ ಪೈಕಿ ತುಫೈಲ್, ಮೊಹಮ್ಮದ್ ಮುಸ್ತಾಫ ಸುಳಿವಿಗೆ ತಲಾ 5 ಲಕ್ಷ, ಉಮರ್ ಫಾರೂಕ್, ಅಬೂಬಕ್ಕರ್ ಸಿದ್ದಿಕ್ ಪತ್ತೆಗೆ ತಲಾ 2 ಲಕ್ಷ ರೂ. ಬಹುಮಾನ ಘೋಷಣೆ ಮಾಡಲಾಗಿತ್ತು. ಈ ಎಲ್ಲಾ ಆರೋಪಿಗಳಿಗೆ ಜೂ.30 ರಂದು ನ್ಯಾಯಾಲಯಕ್ಕೆ ಶರಣಾಗಲು ಡೆಡ್ ಲೈನ್ ನೀಡಲಾಗಿತ್ತು. ನ್ಯಾಯಾಲಯಕ್ಕೆ ಹಾಜರಾಗದೇ ಇದ್ದಲ್ಲಿ ಆರೋಪಿಗಳ ಆಸ್ತಿ ಮುಟ್ಟುಗೋಲು ಹಾಕಲಾಗುವುದು ಎಂದು ಎಚ್ಚರಿಕೆ ನೀಡಿ ನ್ಯಾಯಾಲಯದ ಆದೇಶದ ಪ್ರತಿಯನ್ನು ಆರೋಪಿಗಳ ಮನೆ ಸಹಿತ ಪ್ರ,ಮುಖ ಸ್ಥಳಗಳಲ್ಲಿ ಅಂಟಿಸಿ ಮೈಕ್ ಮೂಲಕ ಪ್ರಚಾರ ಮಾಡಲಾಗಿತ್ತು.
ಈ ನಡುವೆ ಆರೋಪಿಗಳು ವಿದೇಶಕ್ಕೆ ಪರಾರಿಯಾಗಿರುವ ಶಂಕೆ ವ್ಯಕ್ತವಾಗಿದ್ದು, ಮಾಹಿತಿ ಕಲೆ ಹಾಕಲು ಅಧಿಕಾರಿಗಳು ರಾ ಏಜೆನ್ಸಿಯನ್ನು ಸಂಪರ್ಕಿಸಲು ದಾಖಲೆಗಳನ್ನು ನೀಡಿದ್ದು, ಆರೋಪಿಗಳ ಕಾರ್ಯಾಚರಣೆ ನಡೆಸಿ ಭಾರತಕ್ಕೆ ಕರೆ ತರಲು ಪ್ರಯತ್ನಿಸುತ್ತಿದ್ದಾರೆ ಎನ್ನಲಾಗಿದೆ.