ಬೆಳ್ತಂಗಡಿ: ಬೀದಿ ನಾಯಿ ದಾಳಿಗೆ ಸಿಲುಕಿ ಜಿಂಕೆಯೊಂದು ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ಸರಳೀಕಟ್ಟೆ ಹೊಸಮುಗೇರು ಎಂಬಲ್ಲಿ ನಡೆದಿದೆ.
ಎರಡು ವರ್ಷ ಪ್ರಾಯದ ಗಂಡು ಜಿಂಕೆ ಮೇಯುತ್ತಾ ಕಡಿನಂಚಿಗೆ ಬಂದ ಸಂದರ್ಭ ನಾಯಿಯ ದಾಳಿಗೆ ಸಿಲುಕಿದೆ, ಗಂಭೀರ ಸ್ಥಿತಿಯಲ್ಲಿದ್ದ ಜಿಂಕೆಯನ್ನು ಕಂಡು ಸ್ಥಳೀಯರು ಅರಣ್ಯ ಇಲಾಖಾ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ತಕ್ಷಣ ಸ್ಥಳಕ್ಕೆ ಧಾವಿಸಿದ ಅಧಿಕಾರಿಗಳು ಗಾಯಗೊಂಡ ಜಿಂಕೆಯನ್ನು ಸಮೀಪದ ಪಶು ಶಿಕಿತ್ಸಾಲಯಕ್ಕೆ ಕೊಂಡೊಯ್ಯಲಾದರೂ ಆದಾಗಲೇ ಜಿಂಕೆ ಸಾವನ್ನಪ್ಪಿದೆ.
ಮೃತದೇಹವನ್ನು ಅರಣ್ಯ ಇಲಾಖಾ ಡಿಪೋ ಇರುವ ಮಣ್ಣಗುಂಡಿ ಎಂಬಲ್ಲಿ ಅಂತ್ಯ ಸಂಸ್ಕಾರ ಮಾಡಲಾಯಿತು.