ಬಂಟ್ವಾಳ ಸಮಾಜ ಸೇವಾ ಸಹಕಾರಿ ಬ್ಯಾಂಕ್ ನಿರ್ದೇಶಕ ಜನಾರ್ದನ್ ಕುಲಾಲ್ ನಿಧನ | ರೈಲಿನಲ್ಲಿ ಹೃದಯಾಘಾತ

ಬಂಟ್ವಾಳ: ಬಂಟ್ವಾಳ ಸಮಾಜ ಸೇವಾ ಸಹಕಾರಿ ಬ್ಯಾಂಕ್ ನಿರ್ದೇಶಕ, ಬಂಟ್ವಾಳ ಬೈಪಾಸ್ ನಿವಾಸಿ ಜನಾರ್ದನ್ ಕುಲಾಲ್ (75) ಅವರು ರೈಲಿನಲ್ಲಿ ಬೆಂಗಳೂರಿಗೆ ತೆರಳುತ್ತಿದ್ದಾಗ ಹಾಸನದಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಜುಲೈ 2ರ ರವಿವಾರ ರಾತ್ರಿ ಘಟನೆ ನಡೆದಿದ್ದು, ಆಸ್ಪತ್ರೆಗೆ ಕರೆದೊಯ್ದಾಗ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.
ಜನಾರ್ದನ ಅವರು ತಮ್ಮ ಕುಟುಂಬದ ಜತೆ ರವಿವಾರ ಸಂಜೆಯ ರೈಲಿನ ಮೂಲಕ ಬೆಂಗಳೂರಿಗೆ ತೆರಳುತ್ತಿದ್ದ ವೇಳೆ ಹಾಸನ ತಲುಪುತ್ತಿದ್ದಂತೆ ಅನಾರೋಗ್ಯ ಕಾಣಿಸಿಕೊಂಡಿದೆ. ತಕ್ಷಣ ಅವರನ್ನು ಹಾಸನ ರೈಲು ನಿಲ್ದಾಣದಿಂದ ಹಾಸನ ಆಸ್ಪತ್ರೆಗೆ ಸಾಗಿಸಲಾಗಿದ್ದು, ಪರೀಕ್ಷಿಸಿದ ವೈದ್ಯರು ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.


ಸಾಮಾಜಿಕವಾಗಿ ಸಕ್ರೀಯರಾಗಿದ್ದ ಅವರು ಬಂಟ್ವಾಳ ಸಮಾಜ ಸೇವಾ ಸಹಕಾರಿ ಬ್ಯಾಂಕಿನ ನಿರ್ದೇಶಕರಾಗಿದ್ದು, ಕಾರು ಚಾಲಕರಾಗಿದ್ದ ಅವರು ಬಿಎಂಎಸ್ ಸಂಘಟನೆಯಲ್ಲಿ ಸಕ್ರೀಯರಾಗಿದ್ದರು. ಕುಲಾಲ ಸಂಘಟನೆ ಬೆಳವಣಿಗೆಗೆ ಶ್ರಮಿಸಿದ್ದು, ಸಾಕಷ್ಟು ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಿದ್ದರು.



































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top