ಬೆಳ್ತಂಗಡಿ: ಉಜಿರೆ ಎಸ್.ಡಿ.ಎಂ. ಕಾಲೇಜು ಪತ್ರಿಕೋಧ್ಯಮ ವಿಭಾಗದ ಮುಖ್ಯಸ್ಥ ಡಾ.ಭಾಸ್ಕರ್ ಹೆಗ್ಡೆ ಅವರ ಪತ್ನಿ ಸುವರ್ಣಾ ಹೆಗ್ಡೆ (49) ಸೋಮವಾರ ಹೃದಯಾಘಾತದಿಂದ ಉಜಿರೆ ತಮ್ಮ ನಿವಾಸದಲ್ಲಿ ಮೃತಪಟ್ಟಿದ್ದಾರೆ.
ಮೂಲತಃ ಹೊನ್ನಾವರದವರಾದ ಪ್ರಸ್ತುತ ಉಜಿರೆ ಉಂಡ್ಯಾಪು ನಗರದಲ್ಲಿ ನೆಲೆಸಿದ್ದರು.
ಮೃತರು ಪತಿ, ಪುತ್ರ, ತಂದೆ, ತಾಯಿ, ಸಹೋದರ, ಸಹೋದರಿಯನ್ನು ಅಗಲಿದ್ದಾರೆ.