ರಾಮಕುಂಜ : ಉಪ್ಪಿನಂಗಡಿ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ರಾಮಕುಂಜ ಗ್ರಾಮದ ಗೋಳಿತ್ತಡಿಯಲ್ಲಿ ಬೃಹತ್ ಮರವೊಂದು ರಸ್ತೆಗೆ ಅಡ್ಡಬಿದ್ದ ಪರಿಣಾಮ ಸುಮಾರು ಒಂದು ತಾಸಿಗೂ ಹೆಚ್ಚು ಕಾಲ ವಾಹನ ಸಂಚಾರಕ್ಕೆ ಅಡಚಣೆ ಉಂಟಾದ ಘಟನೆ ಸೋಮವಾರ ಸಂಜೆ ನಡೆದಿದೆ.
ಭಾರೀ ಮಳೆದ ಸುರಿದ ಪರಿಣಾಮ ಹೆದ್ದಾರಿ ಬದಿಯಲ್ಲಿದ್ದ ಬೃಹತ್ ಮರವೊಂದು ಮುರಿದು ಹೆದ್ದಾರಿಗೆ ಅಡ್ಡವಾಗಿ ಬಿದ್ದು, ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು.
ಬಳಿಕ ಸ್ಥಳೀಯರು ಮರ ತೆರವುಗೊಳಿಸಿ, ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟರು.