ನವದೆಹಲಿ: ತೈಲ ಮಾರುಕಟ್ಟೆ ಕಂಪನಿಗಳು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಏಳು ರೂಪಾಯಿ ಹೆಚ್ಚಿಸಿದ್ದು, ಇಂದಿನಿಂದ ಜಾರಿಗೆ ಬರಲಿವೆ. 19 ಕೆಜಿ ಎಲ್‌ಪಿಜಿ ಸಿಲಿಂಡರ್‌ನ ಪ್ರತಿ ಸಿಲಿಂಡರ್‌ಗೆ 1,773 ರೂ.ನಿಂದ 1,780 ರೂ.ಗೆ ಏರಿಕೆಯಾಗಿದೆ.
ದೇಶೀಯ ಎಲ್‌ಪಿಜಿ ಸಿಲಿಂಡರ್‌ಗಳ ದರದಲ್ಲಿ ಯಾವುದೇ ಬದಲಾವಣೆ ಆಗಿಲ್ಲ. ಕೊನೆಯ ಬಾರಿಗೆ ವಾಣಿಜ್ಯ ಸಿಲಿಂಡರ್‌ಗಳ ಬೆಲೆಯನ್ನು ಕಳೆದ ವರ್ಷದ ಸೆಪ್ಟೆಂಬರ್ 1 ರಂದು 91.50 ರೂ.ಗಳಷ್ಟು ಕಡಿಮೆ ಮಾಡಲಾಗಿತ್ತು. ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು 2022 ರ ಆಗಸ್ಟ್ 1 ರಂದು 36 ರೂ.ಗಳಷ್ಟು ಕಡಿಮೆಗೊಳಿಸಲಾಯಿತು.
ವಾಣಿಜ್ಯ ಸಿಲಿಂಡರ್ ಗಳ ಏರಿಕೆ ಜುಲೈ 1 ರಿಂದಲೇ ಅನ್ವಯವಾಗುವಂತೆ ಜಾರಿಗೆ ಬರಲಿದೆ. ಈ ಹಿಂದೆ, ಜೂನ್‌ನಲ್ಲಿ ವಾಣಿಜ್ಯ ಸಿಲಿಂಡರ್ ಬೆಲೆಯನ್ನು ಹೆಚ್ಚಿಸಲಾಗಿತ್ತು, ಆದರೆ 14.2 ಕೆಜಿ ಎಲ್‌ಪಿಜಿ ಸಿಲಿಂಡರ್‌ನ ಬೆಲೆಯಲ್ಲಿ ಯಾವುದೇ ಬದಲಾವಣೆ ಇರಲಿಲ್ಲ. ಪ್ರಸ್ತುತ, ಮುಂಬೈನಲ್ಲಿ ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆ 1733.50 ರೂ.ಗಳಾಗಿದ್ದು, ಜೂನ್‌ನಲ್ಲಿ ಕೆಜಿಗೆ 1725 ರೂ. ಇತ್ತು. ಬೆಂಗಳೂರಿನಲ್ಲಿ 19 ಕೆಜಿ ವಾಣಿಜ್ಯ ಸಿಲಿಂಡರ್‌ನ ಬೆಲೆ 2190.5 ರೂಪಾಯಿಗಳಷ್ಟು ಇದೆ.