ಮನೆಗೆ ಗುಡ್ಡ ಜರಿದು ಮಹಿಳೆ ಮೃತ್ಯು | ಘಟನಾ ಸ್ಥಳಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್

ಬಂಟ್ವಾಳ : ಮನೆಗೆ ಗುಡ್ಡ ಜರಿದು ಮಹಿಳೆಯೋರ್ವಳು ಮೃತಪಟ್ಟ ಸಜಿಪ ಮುನ್ನೂರು ಗ್ರಾಮದ ನಂದಾವರದ ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ಮುಲೈ ಮುಗಿಲನ್ ಭೇಟಿ ನೀಡಿದ್ದಾರೆ .

ಅವಘಡ ಸಂಭವಿಸಿದ ಕುಟುಂಬಕ್ಕೆ ರೂ. ಐದು ಲಕ್ಷ ಪರಿಹಾರ ಮತ್ತು ಮನೆ ರಿಪೇರಿಗೆ 1.20 ಲಕ್ಷಪರಿಹಾರವನ್ನು ಸರಕಾರದಿಂದ ನೀಡುವ ಭರವಸೆ ನೀಡಿದರು. ಜೊತೆಗೆ ತಾಲೂಕಿನಲ್ಲಿ ಮತ್ತೆ ಇಂತಹ ಘಟನೆಗಳು ಮರುಕಳಿಸದಂತೆ ಎಚ್ಚರಿಕೆ ವಹಿಸಲು ತಾಲುಕಿನ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ತಹಶಿಲ್ದಾರ್ ಎಸ್.ವಿ.ಕೂಡಲಗಿ, ತಾ.ಪಂ. ಕಾರ್ಯ ನಿರ್ವಹಣಾ ಧಿಕಾರಿ ರಾಜಣ್ಣ , ಪಿಡಿಒ ಲಕ್ಷಣ್ ಮತ್ತು ಇಲಾಖಾ ಅಧಿಕಾರಿಗಳು ಉಪಸ್ಥಿತರಿದ್ದರು.





















































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top