ಕೊಯಮತ್ತೂರು: ಕೊಯಮತ್ತೂರು ಡಿಐಜಿ ವಿಜಯಕುಮಾರ್ ಅವರು ತಮ್ಮ ನಿವಾಸದಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ.
2009ರ ಐಪಿಎಸ್ ಬ್ಯಾಚ್ನವರಾಗಿದ್ದ ಇವರು, 2022 ಜನವರಿ 6ರಂದು ಚೆನ್ನೈನ ಅಣ್ಣಾನಗರ ಡೆಪ್ಯುಟಿ ಕಮಿಷನರ್ನಿಂದ ಕೊಯಮತ್ತೂರು ಡಿಐಜಿಯಾಗಿ ಭಡ್ತಿ ಪಡೆದಿದ್ದರು ಎನ್ನಲಾಗಿದೆ.
ಕಾಂಚೀಪುರಂ, ಕಡಲೂರು, ನಾಗಪಟ್ಟಿಣಂ ಮತ್ತು ತಿರುವರೂರ್ನಲ್ಲಿ ಡಿಎಸ್ಪಿಯಾಗಿ ಕೆಲಸ ಮಾಡಿದ್ದಾರೆ.
ಈ ಕುರಿತು ತಮಿಳುನಾಡು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ವರದಿಗಳ ಪ್ರಕಾರ, ಐಪಿಎಸ್ ಅಧಿಕಾರಿ ತಮ್ಮ ಬೆಳಗಿನ ವಾಕಿಂಗ್ ಬಳಿಕ ಮನೆಗೆ ಮರಳಿದರು ಮತ್ತು ತಮ್ಮ ಪಿಸ್ತೂಲ್ ನೀಡುವಂತೆ ತಮ್ಮ ವೈಯಕ್ತಿಕ ಭದ್ರತಾ ಅಧಿಕಾರಿಯನ್ನು ಕೇಳಿ,ನಂತರ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.