ವಿಪತ್ತು ನಿರ್ವಹಣೆ, ಸಾಮಾಜಿಕ ಕಾರ್ಯ | ಇರ್ದೆ-ಬೆಟ್ಟಂಪಾಡಿ ಶೌರ್ಯ ವಿಪತ್ತು ನಿರ್ವಹಣಾ ಘಟಕ ಪುತ್ತೂರು ತಾಲೂಕಿನಲ್ಲಿ ದ್ವಿತೀಯ ಸ್ಥಾನ

ನಿಡ್ನಳ್ಳಿ: ಇರ್ದೆ-ಬೆಟ್ಟಂಪಾಡಿ ಶೌರ್ಯ ವಿಪತ್ತು ನಿರ್ವಹಣಾ ಘಟಕ ಪುತ್ತೂರು ತಾಲೂಕಿನಲ್ಲಿ ದ್ವಿತೀಯ ಸ್ಥಾನ ಪಡೆದು ಕೊಂಡಿದೆ.

ಪುತ್ತೂರು ಪುರಭವನದಲ್ಲಿ ಜು.7ರಂದು ನಡೆದ ನವಜೀವನ ಸದಸ್ಯರ ಸಮಾವೇಶ ಮತ್ತು ಶ್ರೀ ಸತ್ಯನಾರಾಯಣ ಪೂಜಾ ಕಾರ್ಯಕ್ರಮದಲ್ಲಿ ಅತಿಥಿಗಳು ಪ್ರಶಸ್ತಿ ನೀಡಿ ತಂಡವನ್ನು ಗೌರವಿಸಿದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಧೀನದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಈ ಘಟಕ ವಿಪತ್ತು ನಿರ್ವಹಣೆ ಮತ್ತು ಹಲವು ಸಾಮಾಜಿಕ ಕಾರ್ಯದಲ್ಲಿ ತೊಡಗಿ ಉತ್ತಮ ಕೆಲಸ ಕಾರ್ಯ ಮಾಡಿ ಜನಮನ್ನಣೆ ಗಳಿಸಿತ್ತು. ಘಟಕದ ಅಧ್ಯಕ್ಷ ಆನಂದ, ಸಂಯೋಜಕಿ ಸೇವಾ ಪ್ರತಿನಿಧಿ ಪದ್ಮಾವತಿ. ಡಿ ಹಾಗೂ ಸದಸ್ಯರು ಪ್ರಶಸ್ತಿ ಪಡೆದು ಕೊಂಡರು.



































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top