ಪುತ್ತೂರು: ನಗರದ ಮುಖ್ಯರಸ್ತೆಯಲ್ಲಿರುವ ಲಾಡ್ಜ್ ನ ರೂಂ ಒಂದರಲ್ಲಿ ಕುಳಿತಲ್ಲೇ ಮೃತಪಟ್ಟ ಮೃತದೇಹ ಶನಿವಾರ ಸಂಜೆ ಪತ್ತೆಯಾಗಿದೆ.
ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬಳಿ ಇರುವ ತಂಪು ಪಾನೀಯ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಶಿವಪ್ರಸಾದ್ (40) ಎಂದು ಗುರತಿಸಲಾಗಿದೆ.
ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ತಿಳಿದು ಬಂದಿದ್ದು, ಕಳೆದ ಹಲವಾರು ವರ್ಷಗಳಿಂದ ತಂಪು ಪಾನೀಯ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಶಿವಪ್ರಸಾದ್ ಕೆಲವೊಮ್ಮೆ ಇದೇ ಲಾಡ್ಜ್ ನಲ್ಲಿ ರೂಮ್ ಪಡೆದು ತಂಗುತ್ತಿದ್ದರು ಎನ್ನಲಾಗಿದೆ. ನಗರ ಠಾಣಾ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಮೃತದೇಹವನ್ನು ಸರಕಾರಿ ಆಸ್ಪತ್ರೆಗೆ ಮರಣೋತ್ತರ ಪರೀಕ್ಷಗೆ ಕೊಂಡೊಯ್ದಿದ್ದಾರೆ.
























